ಕೆಂಪೇಗೌಡ ಜಯಂತಿ ರಜೆಗೆ ಸ್ವಾಮೀಜಿ ವಕಾಲತ್ತು

Balagangadharanatha Swamiji
ಬೆಂಗಳೂರು, ಮಾ. 8: ಕೆಂಪೇಗೌಡ ಜಯಂತಿಗೆ ಸರ್ಕಾರಿ ರಜೆ ಘೋಷಿಸುವಂತೆ ಬಾಲಗಂಗಾಧರನಾಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ನಗರದ ಟಿ.ದಾಸರಹಳ್ಳಿಯ ಭುವನೇಶ್ವರಿನಗರದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಆಯೋಜಿಸಿದ್ದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಜತೆಗೆ ಪಕ್ಷಾತೀತವಾಗಿ ಸಮಾಜದ ಸಂಘಟನೆ ಹಾಗೂ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಸ್ವಾಮೀಜಿ ಮನವಿ ಮಾಡಿದರು. ಆಚರಣೆಗೆ ಅನುದಾನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮೂಲಸೌಕರ್ಯವೃದ್ಧಿಗಾಗಿ ರಾಜ್ಯ ಸರ್ಕಾರ 5 ಕೋಟಿ ರೂ. ಅನುದಾನ ಪ್ರಕಟಿಸಿದೆ. ಜತೆಗೆ ಕೆಂಪೇಗೌಡ ದಿನಾಚರಣೆಗೂ ಎರಡು ಕೋಟಿ ರೂ. ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಮುನಿರಾಜು ಮಾತನಾಡಿ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಕೆಂಪೇಗೌಡ ಜಯಂತಿಗೆ ರಜೆ ಘೋಷಿಸಿ ಮಾಡಲು ಹಲವು ಸಂಖ್ಯೆಯಲ್ಲಿ ಸರ್ಕಾರಿ ಸೌಲಭ್ಯ ಜಾರಿಗೊಳಿಸಿರುವೆ. ಈಗ ಒಕ್ಕಲಿಗ ಜನಾಂಗದ ಸಂಘಟನೆ ಮಾಡಲು ಹಿಂದೆ ಬೀಳುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ 4,500 ಚದರ ಅಡಿ ವಿಸ್ತೀರ್ಣದ ಒಕ್ಕಲಿಗರ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಡಿ.ಬಿ.ಚಂದ್ರೇಗೌಡ, ವಿಧಾನಪರಿಷತ್ ಸದಸ್ಯರಾದ ಇ.ಕೃಷ್ಣಪ್ಪ, ಜಗ್ಗೇಶ್, ಕಾಂಗ್ರೆಸ್ ನಾಯಕ ಎಸ್.ಟಿ.ಸೋಮಶೇಖರ್, ದಾಸರಹಳ್ಳಿ ನಗರಸಭೆಯ ಮಾಜಿ ಅಧ್ಯಕ್ಷ ಅಂದಾನಪ್ಪ ಹಾಗೂ ಇತರರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+