For Daily Alerts
ವಿಜಯನಗರ ಟ್ರಸ್ಟ್ : ಭೂಮಿ ವಾಪಸಿಗೆ ಸೂಚನೆ
ಬೆಂಗಳೂರು, ಮಾ. 9 : ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಹಂಪಿ ವಿವಿಯ 80 ಎಕರೆ ಭೂಮಿಯನ್ನು ವಿಜಯನಗರ ಪುನಶ್ಚೇತನ ಟ್ರಸ್ಟ್ ಗೆ ಪರಭಾರೆ ಮಾಡುವ ತೀರ್ಮಾನವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ರಾಜ್ಯಪಾಲರು ರಾಜ್ಯ ಸರಕಾರಕ್ಕೆ ತಾಕೀತು ಮಾಡಿದ್ದಾರೆ.
ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ರವಾನಿಸುವುರೊಂದಿಗೆ ವಿವಾದ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಈ ಇಕ್ಕಟ್ಟಿಗೆ ಬಿಜೆಪಿ ಸರಕಾರ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಹಂಪಿ ವಿವಿಯ 80 ಎಕರೆ ಭೂಮಿ ಪರಭಾರೆ ವಿಷಯ ಟೀಕೆಗಳಿಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ತಕ್ಷಣ ನಿರ್ಧಾರ ಹಿಂದಕ್ಕೆ ಪಡೆಯಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ. ಆದರೆ, ರಾಜ್ಯಪಾಲರ ಪತ್ರ ಕುರಿತು ದೆಹಲಿಯಲ್ಲೇ ಇರುವ ಮುಖ್ಯಮಂತ್ರಿ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.