437 ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ಆರಂಭ
ಬೆಂಗಳೂರು,
ಮಾ. 11 : ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ 437 ಜೂನಿಯರ್ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗವನ್ನು ಆರಂಭಿಸಲು ರಾಜ್ಯಸರ್ಕಾರ ನಿರ್ಧರಿಸಿದೆ. id="toptextpromo">ಈ
ವಿಷಯವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದ ವಿಷಯದತ್ತ ಹೆಚ್ಚು ಆಸಕ್ತಿ ಬೆಳೆಸಬೇಕೆಂಬ ಉದ್ದೇಶದಿಂದ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ, ಇದೇ 270 ಪದವಿಪೂರ್ವ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗವನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು. id='are-slot-1' class='oiad oi-axt oiadv'> id='top-searched-articles'>ಜೊತೆಗೆ
ಈಗಾಗಲೇ ಅರಂಭಗೊಂಡಿರುವ ನೂತನ ಪದವಿಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ. ಅಂದಾಜು 300 ಕೋಟಿ ರೂಪಾಯಿ ವೆಚ್ಚದಲ್ಲಿ 5000 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.











Click it and Unblock the Notifications