ರಾಜ್ಯ ಯೋಜನಾ ಗಾತ್ರ ಶೇ.19 ರಷ್ಟು ಹೆಚ್ಚಳ

ವಿಧಾನ ಪರಿಷತ್ತಿನಲ್ಲಿಂದು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದರು. ರಾಜ್ಯ ಯೋಜನಾ ಗಾತ್ರದ ಬಗ್ಗೆ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯ ಅವರೊಂದಿಗೆ ಚರ್ಚಿಸಲಾಯಿತು. ಈ ವರ್ಷ ರಾಜ್ಯದ ಯೋಜನಾ ಗಾತ್ರ 31050 ಕೋಟಿ ರೂ. ಆಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
2009-10 ಕ್ಕಿಂತ ಪ್ರಸಕ್ತ ಸಾಲಿನಲ್ಲಿ ಯೋಜನಾ ಗಾತ್ರ ಶೇ. 19 ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ರಾಜ್ಯದಲ್ಲಿ ವಿತ್ತೀಯ ಕೊರತೆಯನ್ನು ತಗ್ಗಿಸಿ ನಿವ್ವಳ ಲಾಭದತ್ತ ಕೊಂಡೊಯ್ಯಲಾಗಿದೆ ಎಂದು ಅವರು ತಿಳಿಸಿದರು. ಗೃಹ ಸಚಿವರು ಪಿ ಚಿದಂಬರಂ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸಂಭವಿಸಿರುವ ನೆರೆ ಪರಿಸ್ಥಿತಿ ನಿರ್ವಹಣೆಗೆ ರಾಜ್ಯಕ್ಕೆ 2 ಲಕ್ಷ ಮನೆಗಳನ್ನು ಮಂಜೂರು ಮಾಡುವಂತೆ ಕೋರಲಾಗಿದೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಅವರು ತಿಳಿಸಿದರು.
ಅಲ್ಲದೆ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಸಂಬಂಧ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದು ಕೇಂದ್ರ ಸಚಿವ ಚಿದಂಬರಂ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವಿಷಯವಾಗಿ ಅವರಿಗೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.











Click it and Unblock the Notifications