ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

By Prasad
|
Google Oneindia Kannada News

Ban order during II PUC examination in Madikeri
ಮಡಿಕೇರಿ, ಮಾ. 11 : ಜಿಲ್ಲೆಯಾಧ್ಯಂತ ಮಾರ್ಚ್ 18ರಿಂದ 31ರವರೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಯಾವುದೇ ಅಹಿತಕರ ಘಟನೆಗಳು ಹಾಗೂ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದರ ಜೊತೆಗೆ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಂದರ್ಭದಲ್ಲಿ ಮುಚ್ಚಲು ಸೂಚನೆ ನೀಡಿ ಜಿಲ್ಲಾಧಿಕಾರಿ ಅಶ್ವತ್ಥ್ ನಾರಾಯಣಗೌಡ ಆದೇಶ ಹೊರಡಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮನವಿಯ ಮೇರೆಗೆ ಅಪರಾಧಿ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144ರಡಿ ದತ್ತವಾದ ಅಧಿಕಾರದನ್ವಯ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ.ಮಾರ್ಚ್ 18ರಿಂದ 31ರವರೆಗೆ ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹಾಗೂ ನಾಪೊಕ್ಲುಗಳಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಗಳು, ಸಂತ ಮೈಕಲರ ಪದವಿ ಪೂರ್ವ ಕಾಲೇಜು ಮಡಿಕೇರಿ, ಅರುಣಾ ಪದವಿ ಪೂರ್ವ ಕಾಲೇಜು ಚೇರಂಬಾಣೆ, ಪದವಿ ಪೂರ್ವ ಕಾಲೇಜು ಮೂರ್ನಾಡು ಇದೇ ರೀತಿ ವೀರಾಜಪೇಟೆ ತಾಲ್ಲೂಕಿನ ವೀರಾಜಪೇಟೆ ಮತ್ತು ಪೊನ್ನಂಪೇಟೆಗಳಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಪದವಿ ಪೂರ್ವ ಕಾಲೇಜು ಶ್ರೀಮಂಗಲ, ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ, ಹಾಗೆಯೇ ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಮತ್ತು ಕುಶಾಲನಗರಗಳಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಕುಶಾಲನಗರ, ಪದವಿ ಪೂರ್ವ ಕಾಲೇಜು ಶನಿವಾರಸಂತೆ, ಪದವಿ ಪೂರ್ವ ಕಾಲೇಜು ಕೊಡ್ಲಿಪೇಟೆ ಈ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ನಡೆಯಲಿವೆ.

ಈ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಮಾತ್ರ ಅನ್ವಯವಾಗುವಂತೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನಗಳಂದು ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಮತ್ತು ಬೆರಳಚ್ಚು ಅಂಗಡಿಗಳನ್ನು ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿ ಮುಗಿಯುವವರೆಗೆ ಮುಚ್ಚಲು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X