ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ!

By Mahesh
|
Google Oneindia Kannada News

Bomb scare at BIA
ಬೆಂಗಳೂರು, ಮಾ. 12: ದೆಹಲಿ-ಬೆಂಗಳೂರು ಇಂಡಿಗೋ ಏರ್ ಲೈನ್ಸ್ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿತ್ತು. ವಿಮಾನದಲ್ಲಿದ್ದ 150 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಭಯಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಆಯುಕ್ತ ಬಸವರಾಜ ಮಾಲಗತ್ತಿ ಹೇಳಿದ್ದಾರೆ.

ದೆಹಲಿಯ ಏರ್ ಪೋರ್ಟ್ ಪೊಲೀಸ್ ಕಂಟ್ರೋಲ್ ರೂಂ ನಿಂದ ಬಾಂಬ್ ಬೆದರಿಕೆ ಬಗ್ಗೆ ಸುದ್ದಿ ತಿಳಿಯಿತು. ತಕ್ಷಣ, ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದವಿಮಾನವನ್ನು ನಿಲ್ಲಿಸಿ, ಅದರಲ್ಲಿದ್ದ ಪ್ರಯಾಣಿಕರಿಗೆ ಭದ್ರತೆ ಒದಗಿಸಲಾಗಿದೆ.ಮಧ್ಯಾಹ್ನದಿಂದ ಬಾಂಬ್ ಪತ್ತೆಗಾಗಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಶೋಧ ಕಾರ್ಯ ನಡೆಸಿದ್ದಾರೆ, ಆದರೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ವಾಯುವ್ಯ ವಿಭಾಗ ಪೊಲೀಸ್ ಉಪ ಆಯುಕ್ತ ಬಸವರಾಜ ಮಾಲಗತ್ತಿ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X