ಸಿದ್ಧಗಂಗಾ ಶ್ರೀಗಳ ಹೆಸರಲ್ಲಿ ಅಂಚೆ ಚೀಟಿ ?
ಬೆಂಗಳೂರು,
ಮಾ. 12 : ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರಿನಲ್ಲಿ ಅಂಚೆ ಚೀಟಿ ಹೊರತರುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರಾಜಾ ಅವರಿಗೆ ಪತ್ರ ಬರೆದಿದ್ದಾರೆ. id="toptextpromo"> ಕಾಯಕಯೋಗಿ, ಶತಾಯುಷಿಯೂ ಆಗಿರುವ ಶಿವಕುಮಾರ ಸ್ವಾಮೀಜಿ ಅವರು ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ನೀಡಲು ತಮ್ಮ ಜೀವನ ಮುಡಿಪಾಗಿ ಇಟ್ಟಿದ್ದಾರೆ. ಇದುವರೆಗೆ 120 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಪ್ರತಿ
ವರ್ಷ ಎಂಟು ಸಾವಿರ ವಿದ್ಯಾರ್ಥಿಗಳಿಗೆ ಶ್ರೀಮಠದಲ್ಲಿ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡಲಾಗುತ್ತಿದೆ. ಇವರ ಸೇವೆ ಪರಿಗಣಿಸಿ ಕರ್ನಾಟಕ ಸರಕಾರದ ಅತ್ಯುನ್ನತವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 102 ವರ್ಷ ಪೂರೈಸುತ್ತಿರುವ ಸ್ವಾಮೀಜಿ ಅವರ ಗೌರವಾರ್ಥ ಅಂಚೆ ಚೀಟಿ ತರಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.











Click it and Unblock the Notifications