• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಾನಪದ ವಿವಿ ಸ್ಥಾಪನೆಗೆ ಗೊರುಚ ಆಗ್ರಹ

By Mahesh
|
Google Oneindia Kannada News
ಬೆಂಗಳೂರು, ಮಾ.12: ರಾಜ್ಯದಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪಿಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಯಾವುದೇ ವಿರೋಧವಿಲ್ಲ. ಅಲ್ಲದೆ ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ. ಹಾಗಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಡಿಸಿದ ಬಜೆಟ್ ನಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಯಾವುದೇ ಪ್ರಸ್ತಾಪವಿಲ್ಲದಿರುವುದು ಜಾನಪದ ತಜ್ಞರು ಹಾಗೂ ಜಾನಪದರಿಗೆ ನಿರಾಸೆಯುಂಟುಮಾಡಿದೆ ಎಂದು ಗೊರುಚ ಹೇಳಿದರು.

ಕಣ್ಮರೆಯಾಗುತ್ತಿರುವ ಜಾನಪದ ಕಲೆ, ಗ್ರಾಮೀಣ ಮತ್ತು ಗುಡ್ಡಗಾಡು ಜನ ಸೇರಿದಂತೆ ಪರಿಶಿಷ್ಟ ಸಮುದಾಯದ ಮತ್ತು ರೈತಕಾರ್ಮಿಕರ ಸಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸ್ಥಿತಿಗತಿಗಳ ಸುಧಾರಣೆಗೆ ಹಾಗೂ ಸಂರಕ್ಷಣೆಗೆ ಅಗತ್ಯವಾದ ಮಾರ್ಗದರ್ಶನ ನೀಡಲು ವಿಶ್ವವಿದ್ಯಾಲಯದ ಅವಶಕತ್ಯೆ ಇದೆ. ಒಂದು ವೇಳೆ ವಿಶ್ವವಿದ್ಯಾಲಯ ಸ್ಥಾಪನೆಯಾದಲ್ಲಿ ವಿಶ್ವದಲ್ಲಿ ಮೊದಲ ಜಾನಪದ ವಿಶ್ವವಿದ್ಯಾಲಯ ಎಂಬ ಖ್ಯಾತಿಗೆ ಪ್ರಾತವಾಗಲಿದೆ.

ಇದು ಕೇವಲ ಪದವಿಗಳು ನೀಡುವ ಪಠ್ಯ ಶಿಕ್ಷಣದ ಸಂಸ್ಥೆಯಾಗಿ ಮಾತ್ರವಲ್ಲದೆ ಲಕ್ಷಾಂತರ ಗ್ರಾಮೀಣ ಹಾಗೂ ಗುಡ್ಡಗಾಡು ಜನರಲ್ಲಿ ಆತ್ಮವಿಶ್ವಾಸ ತುಂಬುವ ಒಂದು ವಿಶಿಷ್ಟ ಜೀವನ ವಿದ್ಯಾಲಯವಾಗಲಿದೆ. ಹಾಗೂ ಅಂತಾರಾಷ್ಟ್ರೀಯ ಅಧ್ಯಯನ ಪ್ರವಾಸ ಕೇಂದ್ರವೂ ಆಗಲಿದೆ. ಅದ್ದರಿಂದ ವಿಶ್ವವಿದ್ಯಾಲಯದ ಬಗ್ಗೆ ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಶಾಸಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X