ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷಮಿಸಿ,ತೈಲ ಬೆಲೆ ಇಳಿಕೆ ಅಸಾಧ್ಯ: ಪ್ರಣವ್

By Rajendra
|
Google Oneindia Kannada News

I can't roll back oil hike: Pranab Mukherjee
ನವದೆಹಲಿ, ಮಾ.13: ವಿತ್ತೀಯ ಕೊರತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಲೋಕಸಭೆಯಲ್ಲಿ ಖಡಾಖಂಡಿತವಾಗಿ ಹೇಳಿದ್ದಾರೆ. ಬಜೆಟ್ ಮೇಲೆ ನಡೆದ ಚರ್ಚೆಯಲ್ಲಿ ಅವರು ಮಾತನಾಡುತ್ತಿದ್ದರು.

ಬೆಲೆ ಇಳಿಕೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರ ಮನವಿಗೆ ಸ್ಪಂದಿಸಬೇಕು ಎಂಬ ಆಸೆ ನನಗೂ ಇದೆ. ಆದರೆ ಪ್ರಸಕ್ತ ಹಣಕಾಸು ಪರಿಸ್ಥಿತಿ ಇದಕ್ಕೆ ಅವಕಾಶ ನೀಡುತ್ತಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಪ್ರಣವ್ ಕೋರಿದ್ದಾರೆ. ತಮ್ಮ ಬೇಡಿಕೆಯನ್ನು ತಿರಸ್ಕರಿಸಿದ್ದನ್ನು ಪ್ರತಿಭಟಿಸಿ ಬಿಜೆಪಿ, ಎಡಪಕ್ಷ, ಎಸ್ ಪಿ ಮತ್ತು ಆರ್ ಜೆಡಿ ಸೇರಿ ವಿಪಕ್ಷಗಳು ಸಭಾತ್ಯಾಗ ಮಾಡಿದವು.

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ ಒಂದು ರೂಪಾಯಿ ಅಬಕಾರಿ ಸುಂಕವನ್ನು ಈ ಬಾರಿಯ ಬಜಟ್ ನಲ್ಲಿ ಪ್ರಣವ್ ವಿಧಿಸಿದ್ದರು. ಹಾಗೆಯೇ ಶೇ.2.5ರಷ್ಟಿದ್ದ ಕಸ್ಟಮ್ಸ್ ಸುಂಕವನ್ನು ಶೇ.7.5ರಷ್ಟು ಹೆಚ್ಚಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರು.2.71 ಹಾಗೂ ಡೀಸೆಲ್ ಬೆಲೆ ರು.2.55ರಷ್ಟು ಹೆಚ್ಚಳವಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X