ಜ್ಞಾನಪೀಠ ಪ್ರಶಸ್ತಿ ಕೃತಿಗಳು ಬ್ರೈಲ್ ಲಿಪಿಗೆ
ಬೆಂಗಳೂರು, ಮಾ.15: ಬ್ರೈಲ್ ಲಿಪಿ ಮೂಲಕ ನಾಡಿನ ಏಳು ಜ್ಞಾನಪೀಠ ಪ್ರಶಸ್ತಿ ವಿಜೇತರ ಕನ್ನಡದ ಕೃತಿಗಳನ್ನು ಇನ್ನು ಮುಂದೆ ದೃಷ್ಟಿಹೀನರೂ ಓದಲು ಅವಕಾಶವಿದೆ. ಮಹಾಕವಿ ಕುವೆಂಪು ಅವರ ರಾಮಾಯಣ ದರ್ಶನಂ, ವರಕವಿ ದ.ರಾ. ಬೇಂದ್ರೆ ಅವರ ನಾಕುತಂತಿ, ಖ್ಯಾತ ಸಾಹಿತಿಗಳಾದ ಡಾ.ಶಿವರಾಮ ಕಾರಂತರ ಮೂಕಜ್ಜಿಯ ಕನಸುಗಳು ಹಾಗೂ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಚಿಕವೀರ ರಾಜೇಂದ್ರ, ವಿನಾಯಕ ಕೃಷ್ಣ ಗೋಕಾಕ್ ಅವರ ಭಾರತಸಿಂಧು ರಶ್ಮಿ , ಗಿರೀಶ್ ಕಾರ್ನಾಡ್ ಹಾಗೂ ಪ್ರೊ. ಯು.ಆರ್ ಅನಂತಮೂರ್ತಿ ಆವರ ಸಮಗ್ರ ಸಾಹಿತ್ಯ ಇನ್ನೊಂದು ತಿಂಗಳಲ್ಲಿ ಬ್ರೈಲ್ ಲಿಪಿಯ ರೂಪ ಪಡೆದುಕೊಳ್ಳಲಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಎಸ್.ಜಿ.ಹೊಂಡದಕೇರಿ ಶನಿವಾರ ಈ ವಿಷಯ ತಿಳಿಸಿದರು. ಕರ್ನಾಟಕ ಅಂಧರ ವಿಮೋಚನಾ ವೇದಿಕೆಯ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಧರಿಗೆ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೃತಿಗಳನ್ನು ಓದುವ ಭಾಗ್ಯ ಕಲ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.ಅಂಧರ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಬ್ರೈಲ್‌ಲಿಪಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳನ್ನು ಇನ್ನಷ್ಟು ಉನ್ನತೀಕರಣಗೊಳಿಸುವ ಯೋಜನೆ ಇದೆ ಎಂದು ಅವರು ವಿವರಿಸಿದರು.
ಜಾಣಗೆರೆ ಆರೋಪ: ಸರ್ಕಾರೇತರ ಸಂಘಟನೆ(ಎನ್ ಜಿಒ)ಗಳು ಅಂಧರ ಹೆಸರಿನಲ್ಲಿ ಕೋಟಿಗಟ್ಟಲೇ ಹಣ ಲೂಟಿ ಮಾಡುತ್ತಿವೆ ಎಂದು ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಆರೋಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಳ್ಳವರ ಪ್ರತಿಭೆಯನ್ನು ಮಾತ್ರ ಪ್ರೋತ್ಸಾಹಿಸುತ್ತಿದೆ. ಆದರೆ ಅಂಧರ ಬಗ್ಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ. ಇದೇ ವೇಳೆ ಸರ್ಕಾರ ಹಾಗೂ ಸಂಸ್ಥೆಗಳೂ ಅಂಧರ ಪ್ರತಿಭೆಗೆ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿಲ್ಲ. ಅಂಧರಿಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿದಲ್ಲಿ ಅವರು ಮುಖ್ಯವಾಹಿನಿಗೆ ಬರುವುದು ಸುಲಭವಾಗುತ್ತಿತ್ತು ಎಂದು ವೆಂಕಟರಾಮಯ್ಯ ವಿಷಾದಿಸಿದರು.
ಬೇರೆ ಇಂದ್ರಿಯ ಶಕ್ತಿ: ಅಂಧರಿಗೆ ದೃಷ್ಟಿ ಇಲ್ಲದಿದ್ದರೂ ಅವರಿಗೆ ಬೇರೆ ಇಂದ್ರಿಯಗಳ ಶಕ್ತಿ ಇರುತ್ತದೆ. ಹೀಗಾಗಿ ಅಂಧರು ತಮ್ಮ ಪ್ರತಿಭೆಯನ್ನು ತಾವೇ ಗುರುತಿಸಿಕೊಳ್ಳಬೇಕು. ಇದಾದಲ್ಲಿ ಅವರು ಇತರರಿಗಿಂತ ಹೆಚ್ಚಿನ ಸಾಧನೆ ಮಾಡಬಹುದು ಎಂದು ಕವಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ವೇದಿಕೆ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಗವಾರ ಮೊದಲಾದವರು ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications