ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಬಿಎಂಪಿ : ಕಾಂಗ್ರೆಸ್ ನಲ್ಲಿ ಬಂಡಾಯದ ಬಿರುಗಾಳಿ

By Mahesh
|
Google Oneindia Kannada News

BBMP
ಬೆಂಗಳೂರು, ಮಾ. 15 : ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಗೊಂದಲ, ಜಟಾಪಟಿ, ನಾಮಪತ್ರ ಸಲ್ಲಿಕೆಯ ಭರಾಟೆಗೆ ಕೊನೆಗೂ ತೆರೆಬಿದ್ದಿದ್ದು, ಅಮವಾಸ್ಯೆ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ನಾಮಪತ್ರಗಳ ಸಂಖ್ಯೆ 2 ಸಾವಿರ ದಾಟಿದೆ. ಇನ್ನೊಂದಡೆ ಟಿಕೆಟ್ ಸಿಗದೇ ನಿರಾಶೆಗೊಂಡಿರುವ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಅವಮಾಸ್ಯೆ ಲೆಕ್ಕಿಸದೇ ಅನೇಕ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಪ್ರಮುಖ ಮೂರು ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿವೆ. ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಅಖಾಡ ರಂಗೇರತೊಡಗಿದೆ. ಮಂಗಳವಾರ ಯುಗಾದಿ ಹಬ್ಬ ಬಂದಿರುವುದರಿಂದ ಅಭ್ಯರ್ಥಿಗಳು ತಮ್ಮ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಲಿದ್ದಾರೆ.

ಬಹುತೇಕ ವಾರ್ಡ್ ಗಳಲ್ಲಿ ತ್ರಿಕೋನ ಸ್ಪರ್ಧೆಗಳಿವೆ. ಆಡಳಿತರೂಢ ಬಿಜೆಪಿಗೆ ಅಗ್ನಿಪರೀಕ್ಷೆಯಾದರೆ, ಬಿಬಿಎಂಪಿ ವಲಯದಲ್ಲಿ ತನ್ನ ಸಾಮರ್ಥ್ಯ ತೋರಲು ಕಾಂಗ್ರೆಸ್, ಜೆಡಿಎಸ್ ಸಾಕಷ್ಟು ಶ್ರಮವಹಿಸುತ್ತಿವೆ. ಭಾನುವಾರ ರಾತ್ರಿವರೆಗೂ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ತಯಾರಿಸಲು ಹರಸಾಹಸ ಮಾಡಿದೆ. ಆದರೂ, ಬಂಡಾಯ ಕಾವು ಜೋರಾಗಿದೆ. ಪಕ್ಷದ ವಿರುದ್ಧ ಬಂಡೆದ್ದು ಕಣಕ್ಕಿಳಿಯುವವರ ಸಂಖ್ಯೆ ಹೆಚ್ಚಿದೆ. ಬಿಜೆಪಿ ಕೂಡಾ ಇದಕ್ಕೆ ಹೊರತಲ್ಲ. ಕಾಂಗ್ರೆಸ್ ಗೆ ಹೋಲಿಸಿದರೆ ಬಂಡಾಯಗಾರರ ಸಂಖ್ಯೆ ಕಡಿಮೆ ಎನ್ನಬಹುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X