ಇನ್ಮುಂದೆ ವಿದೇಶಿ ಶಿಕ್ಷಣ ಭಾರತದಲ್ಲೇ ಲಭ್ಯ

Kapil Sibal
ನವದೆಹಲಿ, ಮಾ. 15 : ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಮಾರ್ಗವನ್ನು ಕಂಡುಕೊಂಡಿದ್ದು, ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆ 2010 ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತು.

ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆ 2010 ವಿಧೇಯಕಕ್ಕೆ ಅಧಿಕೃತ ಅನುಮತಿ ನೀಡಲಾಯಿತು. ಶೀಘ್ರದಲ್ಲಿ ಈ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಸರಕಾರ ಹೇಳಿದೆ. ಇದು ಸರಕಾರ ಮಹತ್ವದ ಸಾಧನೆ.

ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ವಿದೇಶಿಕ್ಕೆ ತೆರಳುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳು ಪದವಿ ಮಟ್ಟದ ಶಿಕ್ಷಣವನ್ನು ಭಾರತದಲ್ಲೇ ನೀಡಲಿವೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವ ಕಪಿಲ್ ಸಿಬಲ್ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿದೇಶಿ ವಿಶ್ವವಿದ್ಯಾಲಯ ಸ್ಥಾಪನೆ ವಿಧೇಯಕಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ. ಈ ವಿಧೇಯಕಕ್ಕೆ ಎಡಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಕಾರಣಕ್ಕಾಗಿ ಮಸೂದೆ ಸಾಧಕ ಬಾಧಕಗಳ ಅವಲೋಕನಕ್ಕೆ ಸಮಿತಿ ರಚಿಸಲಾಗಿತ್ತು. ಕೊನೆಯದಾಗಿ ಮೂಲ ಸ್ವರೂಪದಲ್ಲೇ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+