ಚರ್ಚ್ ನಲ್ಲೊಬ್ಬ ಕಾಮುಕ ಪಾದ್ರಿ
ಬೆಂಗಳೂರು,
ಮಾ. 15 : ಪಾದ್ರಿಯೊಬ್ಬರು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಚರ್ಚ್ ನ ಇತರೆ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿರುವ ಘಟನೆ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದೆ. id="toptextpromo">ಜಗಜೀವನ್
ರಾಂನಗರದ ಸಮೀಪದ ರಾಯಪುರದಲ್ಲಿರುವ ಸೇಂಟ್ ಫಾದರ್ ಅಂಡ್ ಪಾಲ್ ಚರ್ಚ್ ನ ಫಾದರ್ ಆರೋಗ್ಯದಾಸ್ ಅವರು ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ. ಅಲ್ಲದೇ ಚರ್ಚ್ ನಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆರೋಗ್ಯದಾಸ್ ವಿರುದ್ಧ ಜೆಜೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಿಗೆ ದೂರು ನೀಡಿದ ವ್ಯಕ್ತಿಗಳನ್ನೇ ಬಂಧಿಸಿ ದೌರ್ಜನ್ಯ ನಡೆಸುತ್ತಿದ್ದಾರೆ. ಪೊಲೀಸರು ಆರೋಗ್ಯ ದಾಸ್ ನಿಂದ ಹಣ ಪಡೆದು ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯರ್ಕಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ವಿಷಯ
ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಮತ್ತಷ್ಟು ಗಂಭೀರವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.











Click it and Unblock the Notifications