• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾದಿಗರ ಸಮಾವೇಶಕ್ಕೆ ಮೀರಾಕುಮಾರ್

By Mahesh
|

ಚಿತ್ರದುರ್ಗ, ಮಾ. 19 : ಶನಿವಾರ ( ಮಾ 20 ) ರಾಜ್ಯ ಮಾದಿಗರ ರಾಜ್ಯ ಸಮಾವೇಶ ಮತ್ತು ಗುರುಪೀಠ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭ ನಗರದ ರಾಷ್ಟ್ರೀಯ ಹೆದ್ದಾರಿ 4ರ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ನಡೆಯಲಿದೆ ಎಂದು ಮಾದಾರ ಗುರುಪೀಠ ಟ್ರಸ್ಟ್ ತನ್ನ ಪತ್ರಿಕಾ ಹೇಳಿಕೆಯಲ್ಲಿತಿಳಿಸಿದೆ.

ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಸಮಾವೇಶ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಶಿವಮೂರ್ತಿ ಮುರುಘಾ ಶರಣರು, ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ದಲಿತರಲ್ಲಿ ಒಟ್ಟು 101 ಉಪಪಂಗಡಗಳಿದ್ದು ಆಯಾಯ ಜಾತಿಗಳ ಸಂಖ್ಯೆ ಆಧರಿಸಿ ಮೀಸಲಾತಿ ಕಲ್ಪಿಸುವಂತೆ ಸರಕಾರವನ್ನು ಒತ್ತಾಯಿಸಲಾಗುವುದು. ಈ ಸಮಾರಂಭದಲ್ಲಿ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮಾದಾರ ಗುರುಪೀಠ ಹೇಳಿಕೆ ನೀಡಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X