ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋಹತ್ಯೆ ನಿಷೇಧ ಕಾನೂನು: ಬಜರಂಗದಳ ಸ್ವಾಗತ

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

Bajarangdal in Shivamogga
ಶಿವಮೊಗ್ಗ,ಮಾ.20 : ಗೋಹತ್ಯೆ ನಿಷೇಧ ಕಾನೂನು ಜಾರಿಗೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಬಜರಂಗದಳ ಅಭಿನಂದನೆ ಸಲ್ಲಿಸಿದೆ. ಈ ಸಂಭ್ರಮವನ್ನು ಬಜರಂಗದಳದ ಕಚೇರಿ ಎದುರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಬಜರಂಗದಳದ ಸಂಚಾಲಕ ಸೂರ್ಯನಾರಾಯಣ್ ಮಾತನಾಡಿ, ಹಲವಾರು ವರ್ಷಗಳಿಂದ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸುವಂತೆ ಬಜರಂಗದಳ ಹೋರಾಟ ಮಾಡುತ್ತಾ ಬಂದಿದ್ದು, ಬಜರಂಗದಳದ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದ್ದು, ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರಲ್ಲದೆ, ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸಹಕರಿಸಿದ ವಿರೋಧ ಪಕ್ಷದ ಎಲ್ಲಾ ನಾಯಕರಿಗು ಧನ್ಯವಾದ ಹೇಳಿದರು.

ತೊಗಾಡಿಯಾ ಬಂಧನಕ್ಕೆ ಖಂಡನೆ

ಒರಿಸ್ಸಾದಲ್ಲಿನ ಗಲಭೆ ಪೀಡಿತ ಪ್ರದೇಶವಾದ ಕಂಧಮಾಲ್ ಜಿಲ್ಲೆಗೆ ಭೇಟಿ ನೀಡಲು ಪ್ರಯತ್ನಿಸಿದ ವಿಶ್ವ ಹಿಂದೂ ಪರಿಷತ್‌ನ ಮುಖಂಡ ಪ್ರವೀಣ್ ತೊಗಾಡಿಯಾರವರನ್ನು ನಿನ್ನೆ ಮಧ್ಯ ರಾತ್ರಿ ಪೊಲೀಸರು ಬಂಧಿಸಿದ್ದು, ಅವರ ಬಂಧನವನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಸಂಚಾಲಕ ಸೂರ್ಯನಾರಾಯಣ್ ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್‌ನ ಸ್ಥಳೀಯ ನಾಯಕ ಸ್ವಾಮಿ ಲಕ್ಷ್ಮಣಾನಂದ ಸರಸ್ವತಿಯವರನ್ನು ಉಗ್ರವಾದಿಗಳು ಹತ್ಯೆ ಮಾಡಿದ್ದು, ಹತ್ಯೆ ಮಾಡಿದ ರಾಷ್ಟ್ರದ್ರೋಹಿಗಳನ್ನು ಹಿಡಿದು ಶಿಕ್ಷಿಸುವ ಬದಲು ಪೊಲೀಸರು ಪ್ರವೀಣ್ ತೊಗಾಡಿಯಾರವರನ್ನು ಬಂಧಿಸಿದ್ದಾರೆ. ಬಂಧನವನ್ನು ಖಂಡಿಸಿ ದೇಶದ ವಿವಿಧೆಡೆ ಹೋರಾಟ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ನಾಳೆ ನಡೆಯಲಿರುವ ವಿರಾಟ್ ಹಿಂದೂ ಯುವ ಸಮಾವೇಶಕ್ಕೆ ವಿಹೆಚ್‌ಪಿ ಮುಖಂಡ ಪ್ರವೀಣ್ ತೊಗಾಡಿಯಾ ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X