ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ
ಬೆಂಗಳೂರು,
ಮಾ.20: ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆ ಮತ್ತು ಧರಣಿಯ ನಡುವೆ 'ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ, 2010'ನ್ನು ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ವಿಧೇಯಕ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆನಡೆದಿತ್ತು. id="toptextpromo">ಆದರೆ
ಕಾಂಗ್ರೆಸ್ ಮತ್ತು ಜೆಡಿಎಸ್ ನ ಸದಸ್ಯರು ವಿಧೇಯಕದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧೇಯಕದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಸುಮಾರು ನಾಲ್ಕು ಗಂಟೆಗಳಿಗೂ ಅಧಿಕ ಕಾಲ ವಿಧಾನಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಗೋಹತ್ಯೆ ನಿಷೇಧ ವಿಧೇಯಕದ ಬಗ್ಗೆ ಕಿಡಿಕಾರಿದರು. id='are-slot-1' class='oiad oi-axt oiadv'> id='top-searched-articles'>ಈ
ವಿಧೇಯಕ ಇನ್ನೂ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ. ಮುಂದಿನ ವಿಧಾನಮಂಡಲ ಅಧಿವೇಶನದ ವೇಳೆ ಪರಿಷತ್ತಿನಲ್ಲಿ ಅಂಗೀಕಾರವಾದ ಬಳಿಕ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುತ್ತದೆ. ಕರ್ನಾಟಕದಲ್ಲಿನ ಪಶುಸಂಪತ್ತನ್ನು ಸಂರಕ್ಷಿಸಲು ಈ ವಿಧೇಯಕವನ್ನು ತರುತ್ತಿರುವುದಾಗಿ ಯಡಿಯೂರಪ್ಪ ಈ ಹಿಂದೆ ತಿಳಿಸಿದ್ದರು.











Click it and Unblock the Notifications