ಟರ್ಫ್ ಕ್ಲಬ್ ಸ್ಥಳಾಂತರಕ್ಕೆ 6 ತಿಂಗಳ ಗಡುವು
ಬೆಂಗಳೂರು,
ಮಾ.22: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಬೆಂಗಳೂರು ಟರ್ಫ್ ಕ್ಲಬ್ ಅನ್ನು ದೊಡ್ಡಜಾಲಕ್ಕೆ ಸ್ಥಳಾಂತರಿಸುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ಸೆಪ್ಟೆಂಬರ್ ತಿಂಗಳೊಳಗೆ ಸ್ಥಳಾಂತರ ಪೂರ್ಣಗೊಳ್ಳಬೇಕು ಎಂದು ನ್ಯಾಯಮೂರ್ತಿ ವಿ ಗೋಪಾಲಗೌಡ ತಿಳಿಸಿದರು. ಆದರೆ, ಕೋರ್ಟ್ ಆದೇಶವನ್ನು ಟರ್ಫ್ ಕ್ಲಬ್ ಮತ್ತೆ ಪ್ರಶ್ನಿಸುವ ಸಾಧ್ಯತೆಗಳಿವೆ. id="toptextpromo">ಬೆಂಗಳೂರಿನ
ಹೃದಯ ಭಾಗದಲ್ಲಿರುವ ರೇಸ್ ಕೋರ್ಸ್ ನಲ್ಲಿ ರೇಸ್ ಡೇ ಇರುವ ದಿನಗಳಲ್ಲಿ ಸಂಚಾರ ದಟ್ಟಣೆಯಿಂದ ಭಾರಿ ತೊಂದರೆಯುಂಟಾಗುತ್ತದೆ. ಆದ್ದರಿಂದ ಟರ್ಫ್ ಕ್ಲಬ್ ಸ್ಥಳಾಂತರ ಸೂಕ್ತ ಎಂಬ ನಿರ್ಣಯವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಇದಕ್ಕೆ ಹೈಕೋರ್ಟ್ ಕೂಡ ಹಸಿರು ನಿಶಾನೆ ತೋರಿಸಿ,ದೊಡ್ಡಜಾಲದ ಅಮಾನಿಕೆರೆಗೆ ಸ್ಥಳಾಂತರಿಸಲು ಸೂಚಿಸಿತ್ತು. ಆದರೆ, ನೂರು ವರ್ಷ ಇತಿಹಾಸವುಳ್ಳ ಟರ್ಫ್ ಕ್ಲಬ್ ಹೊಸ ಜಾಗಕ್ಕೆ ಹೊಂದಿಕೊಳ್ಳಲು ಹಾಗೂ ಮೂಲ ಸೌಕರ್ಯ ನಿರ್ಮಾಣ ಮಾಡಲು ಕನಿಷ್ಠವೆಂದರೂ ನಾಲ್ಕೂವರೆ ವರ್ಷ ಬೇಕಾಗುತ್ತದೆ ಎಂದು ಪಟ್ಟು ಹಿಡಿದಿತ್ತು. id='are-slot-1' class='oiad oi-axt oiadv'> id='top-searched-articles'>ಬಿಟಿಸಿಯ
ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ವಿ ಗೋಪಾಲಗೌಡ ನೇತೃತ್ವದ ವಿಭಾಗೀಯ ಪೀಠ, ದೊಡ್ಡಜಾಲಗೆ ಕ್ಲಬ್ ಸ್ಥಳಾಂತರ ಮಾಡಬೇಕೆಂದು ಆದೇಶ ಹೊರಡಿಸಿದೆ. ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ನೌಕರರಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಟರ್ಫ್ ಕ್ಲಬ್ ಸುಮಾರು 73.35 ಎಕರೆ ವಿಸ್ತೀರ್ಣದ ಪ್ರದೇಶವನ್ನು ಹೊಂದಿದೆ.











Click it and Unblock the Notifications