ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ. 1 : ಎಸ್ಎಸ್ಎಲ್ ಸಿ ಪರೀಕ್ಷೆ ಶುರು

By Mrutyunjaya Kalmat
|
Google Oneindia Kannada News

SSLC Exams to kick off on Apr 1
ಬೆಂಗಳೂರು, ಮಾ. 24 : 2010 ರ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಗಳು ಏಪ್ರಿಲ್ 1 ರಿಂದ 9ರ ವರೆಗೆ ನಡೆಯಲಿವೆ. ರಾಜ್ಯದ 2,895 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ರಾಜ್ಯದ 11,635 ಪ್ರೌಢಶಾಲೆಗಳ 8,35,498 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 478 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಅಕ್ರಮಗಳು ನಡೆಯದಂತೆ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಾಗೃತಿ ದಳವನ್ನು ರಚಿಸಲಾಗಿದೆ ಎಂದರು.

ಅಂಗವಿಕಲ ವಿದ್ಯಾರ್ಥಿಗಳಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷೆ ನಡೆಯುವ ಸಮಯದಲ್ಲಿ ಎಲ್ಲ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಪರೀಕ್ಷೆ ಮುಗಿದ ನಂತರ ರಾಜ್ಯದಲ್ಲಿ 206 ಮೌಲ್ಯಮಾಪನ ಕೇಂದ್ರಗಳನ್ನು ರಚಿಸಲಾಗಿದ್ದು, 40 ಸಾವಿರ ಮೌಲ್ಯಮಾಪಕರು ಏಪ್ರಿಲ್ 15 ರಿಂದ ಮೌಲ್ಯಮಾಪನ ಮಾಡಲಿದ್ದು, ಮೇ ತಿಂಗಳಲ್ಲಿ ಫಲಿತಾಂಶ ನೀಡಲಾಗುವುದು ಎಂದರು.

ಎಸ್ಎಸ್ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಧೈರ್ಯ ತುಂಬಲು ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-2331 2244, 2331 2245 ಅನ್ನು ಸಂಪರ್ಕಿಸಿ ಸಲಹೆ, ಸೂಚನೆಗಳನ್ನು ಪಡೆದುಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಾಗೇರಿ ಸಲಹೆ ನೀಡಿದರು.

ವೇಳಾಪಟ್ಟಿಗಳು:
ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆ
ದ್ವಿತೀಯ ಪಿಯುಸಿ 2010 ಪರೀಕ್ಷೆ
ಕರ್ನಾಟಕ ಸಿಇಟಿ 2010 ಪರೀಕ್ಷೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X