ಟಿ-20 ವಿಶ್ವಕಪ್ ನಲ್ಲಿ ಆಡಲ್ಲ, ಸಚಿನ್
ಮುಂಬೈ,
ಮಾ. 24 : ವೆಸ್ಟ್‌ಇಂಡೀಸ್‌ನಲ್ಲಿ ಏಪ್ರಿಲ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನಲ್ಲಿ ಆಡುವುದಿಲ್ಲವೆಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸ್ಪಷ್ಟಪಡಿಸಿದ್ದಾರೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಹ ಮತ್ತೊಮ್ಮೆ ಹೇಳಿದ್ದಾರೆ. id="toptextpromo">ತಮ್ಮ
ನಿರ್ಧಾರವನ್ನು ಬದಲಾಯಿಸುವಂತೆ ಸುನಿಲ್ ಗಾವಸ್ಕರ್ ಸೇರಿದಂತೆ ಹಿರಿಯ ಮಾಜಿ ಆಟಗಾರರು ಮನವಿ ಮಾಡಿಕೊಂಡಿದ್ದರು. 2007ರ ನಂತರ ಯಾವುದೇ ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನು ನಾನು ಆಡಿಲ್ಲ. ಆದ್ದರಿಂದ ಇದೀಗ ಇದು ಸಮಸ್ಯೆಯ ವಿಷಯವಾಗಲಿದೆಯೆಂಬುದನ್ನು ನಾನು ನಂಬುವುದಿಲ್ಲ ಎಂದು ಸಚಿನ್ ಹೇಳಿದರು. id='are-slot-1' class='oiad oi-axt oiadv'> id='top-searched-articles'>ಸಚಿನ್
ಜೊತೆ ಹಿರಿಯ ಆಟಗಾರರಾದ ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಚುಟುಕು ಪಂದ್ಯಗಳಲ್ಲಿ ಆಡದಿರಲು ನಿರ್ಧಾರ ಕೈಗೊಂಡಿದ್ದರು. ಚೊಚ್ಚಲ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಟಿ-20 ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿತ್ತು. ಇಂಗ್ಲೆಂಡ್ ನಲ್ಲಿ ನಡೆದ ಎರಡನೇ ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನ ತಂಡ, ಶ್ರೀಲಂಕಾವನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.











Click it and Unblock the Notifications