ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಬನ್ನಿ
ಮಂಡ್ಯ
,ಮಾ 24 : ಇತಿಹಾಸ ಪ್ರಸಿದ್ಧ ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ ನಾಳೆ ರಾತ್ರಿ ( ಮಾ 25 , 8ಗಂಟೆಯಿಂದ) ಆರಂಭವಾಗಲಿದ್ದು, ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಜಿಲ್ಲಾ ಖಜಾನೆಯಿಂದ ವೈರಮುಡಿ ಮತ್ತು ರಾಜಮುಡಿ ಕಿರೀಟವನ್ನು ಬಿಗಿ ಪೋಲಿಸ್ ಬಂದೋಬಸ್ತ್ ನಡುವೆ ದೇವಾಲಯದ ಅರ್ಚಕರಿಗೆ ನೀಡಲಾಗುತ್ತದೆ. ಸ್ವಾಮಿಗೆ ಕಿರೀಟಧಾರಣಾ ಮಹೋತ್ಸವ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. id="toptextpromo">ಉತ್ಸವದಲ್ಲಿ
ಪಾಲ್ಗೊಳ್ಳಲು ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ, ನೆರೆಯ ತಮಿಳುನಾಡು, ಆಂಧ್ರಪ್ರದೇಶ ಮತ್ತು ನೇಪಾಳ ದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು ಎಲ್ಲಾ ಛತ್ರಗಳು ಭಕ್ತಾದಿಗಳಿಂದ ತುಂಬಿಹೋಗಿದೆ. id='are-slot-1' class='oiad oi-axt oiadv'> id='top-searched-articles'>ಮುಖ್ಯಮಂತ್ರಿ
ಯಡಿಯೂರಪ್ಪ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಭಕ್ತರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ತುರ್ತು ವೈದ್ಯಕೀಯ ಸೇವೆ ಕಲ್ಪಿಸಲು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಬುಲೆನ್ಸ್ ಸೇವೆ ಸಜ್ಜುಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಡ್ಯ, ಮೈಸೂರು, ಕೆ ಆರ್ ಪೇಟೆ, ನಾಗಮಂಗಲ, ಪಾಂಡವಪುರ, ಬೆಂಗಳೂರಿನಿಂದ ವಿಶೇಷ ಬಸ್ ಸೌಕರ್ಯ ಮತ್ತು ಪಾಂಡವಪುರ ರೈಲ್ವೆ ನಿಲ್ದಾಣದಿಂದ ನೇರ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.











Click it and Unblock the Notifications