ಟಿ20 ವಿಶ್ವಕಪ್ ತಂಡದಲ್ಲಿ ವಿನಯ್ ಕುಮಾರ್

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ತಂಡದಲ್ಲಿ ಯುವ ಆಟಗಾರರಿಗೆ ಮತ್ತು ಆಲ್ ರೌಂಡರುಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ವೀರೇಂದ್ರ ಸೆಹ್ವಾಗ್ ಅವರು ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಗಾಯದ ಸಮಸ್ಯೆ ಎದುರಿಸುತ್ತಿರುವ ಆರಂಭಿಕ ಬ್ಯಾಟ್ಸ್ ಮನ್ ಗೌತಮ್ ಗಂಭೀರ್ ಮತ್ತು ಮಧ್ಯಮ ಕ್ರಮಾಂಕರ ದಾಂಡಿಗ ಯುವರಾಜ್ ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ.
ತಂಡ ಹೀಗಿದೆ : ಮಹೇಂದ್ರ ಸಿಂಗ್ ಧೋನಿ, ವೀರೇಂದ್ರ ಸೆಹ್ವಾಗ್, ಗೌತಮ ಗಂಭೀರ್, ಯುಸೂಫ್ ಪಠಾಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಜಾಹೀರ್ ಖಾನ್, ಪಿಯೂಶ್ ಚಾವ್ಲಾ, ಸುರೇಶ್ ರೈನಾ, ರವೀಂದ್ರ ಜಡೇಜಾ, ಪ್ರವೀಣ್ ಕುಮಾರ್, ಆಶಿಶ್ ನೆಹ್ರಾ, ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಮತ್ತು ವಿನಯ್ ಕುಮಾರ್.
ಕರ್ನಾಟಕದ ಉದಯೋನ್ಮುಖ ಆಟಗಾರರಾದ ಮನೀಶ್ ಪಾಂಡೆ ಮತ್ತು ಮಿಥುನ್ ಅಭಿಮನ್ಯು ಅವರು ಕೂಡ ಸಂಭಾವ್ಯ 30 ಆಟಗಾರರ ತಂಡದಲ್ಲಿದ್ದರು. ಆದರೆ, ಆಯ್ಕೆಗಾರರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ವಿನಯ್ ಕುಮಾರ್ ಪ್ರಸಕ್ತ ಐಪಿಎಲ್ ಮೂರನೇ ಆವೃತ್ತಿಯಲ್ಲಿ ಅತ್ಯುತ್ತಮವಾಗಿ ಆಡುತ್ತಿದ್ದು, ಆಯ್ಕೆಯಿಂದ ಕರ್ನಾಟಕದ ಜನತೆಯಲ್ಲಿ ಸಂತಸ ಮೂಡಿಸಿದ್ದಾರೆ.
ವೆಸ್ಟ್ ಇಂಡೀಸಿನ ಬೌನ್ಸಿ ಪಿಚ್ ಗಳು ವೇಗಿಗಳಿಗೆ ಅನುಕೂಲಕರವಾಗಿವೆ. ವಿನಯ್ ಕುಮಾರ್ ಮಧ್ಯಮ ವೇಗಿಯಾಗಿದ್ದರೂ ಚಾಣಾಕ್ಷತನದಿಂದ ಬೌಲಿಂಗ್ ಮಾಡುತ್ತಿರುವುದರಿಂದ ಸಹಜವಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications