ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾನಕ್ಕೆ ಗುರುತಿನ ಚೀಟಿ ಕಡ್ಡಾಯ

By Mrutyunjaya Kalmat
|
Google Oneindia Kannada News

Stage set for BBMP Elections
ಬೆಂಗಳೂರು, ಮಾ. 27 : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ. ಮತದಾನ ಪ್ರತಿಯೊಬ್ಬರ ಹಕ್ಕಾಗಿರುವುದರಿಂದ ಅದನ್ನು ನಾವೆಲ್ಲರೂ ತಪ್ಪದೆ ಚಲಾಯಿಸೋಣ. ಹಾಂ, ಮತ ಚಲಾಯಿಸುವ ಅವಸರದಲ್ಲಿ ಮತದಾರರ ಗುರುತಿನ ಚೀಟಿ ಮರೆತು ಮತದಾನ ಕೇಂದ್ರಕ್ಕೆ ತೆರಳಿದರೆ ಮತದಾನಕ್ಕೆ ಅವಕಾಶವಿಲ್ಲ. ಮತದಾನ ಮಾಡಬೇಕೆನ್ನುವವರು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಮತಗಟ್ಟೆಗೆ ಹೋಗಬೇಕು.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ, 100 ವಾರ್ಡ್ ಗಳಿದ್ದ ಪಾಲಿಕೆ ಇದೀಗ 198 ವಾರ್ಡ್ ಗಳಾಗಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಚುನಾವಣೆ ನಡೆಯತ್ತಿದೆ. ಭಾನುವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರಗೆ ಮತದಾನ ನಡೆಯಲಿದೆ ಎಂದರು.

ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತಗಟ್ಟೆಗಳಿಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಇಂದು ಸಂಜೆಯೇ ಎಲೆಕ್ಟ್ರಾನಿಕ್ ಮತಯಂತ್ರದ ಜೊತೆಗೆ ಮತದಾನ ಕೇಂದ್ರಕ್ಕೆ ತೆರಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆಯ ಎಲ್ಲ ಹಂತದಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ಸೂಚಿಸಲಾಗಿದೆ. ಈ ಬಾರಿ ಮತದಾನ ಮಾಡುವವರಿಗೆ ಬಲಗೈ ತೋರುಬೆರಳಿಗೆ ಶಾಹಿ ಹಾಕುವಂತೆ ನಿರ್ದೇಶನ ನೀಡಲಾಗಿದೆ ಎಂದು ಮೀನಾ ಸ್ಪಷ್ಟಪಡಿಸಿದರು.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಎಲ್ಲೆಡೆ ಸರ್ಪಗಾವಲು ಹಾಕಲಾಗಿದ್ದು, ಮತದಾನದ ಹಕ್ಕು ಹೊಂದಿಲ್ಲದವರು ಮತಕ್ಷೇತ್ರ ಬಿಟ್ಟು ಹೊರಹೋಗುವಂತೆ ಸೂಚಿಸಲಾಗಿದೆ. 198 ವಾರ್ಡ್ ಗಳಲ್ಲಿ ಮತದಾನ ನಡೆಯಲಿದ್ದು, ಸೂಕ್ಷ್ಮ,ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಒಟ್ಟು 66,06,674 ಮತದಾರರು ಮತ ಚಲಾಯಿಸಲಿದ್ದಾರೆ.

ಈಗಾಗಲೇ ಅಧಕಾರಿಗಳು ಮತಗಟ್ಟೆಗೆ ತೆರಳಿದ್ದು, ನಾಲ್ಕು ವಿಭಾಗಗಳನ್ನು ತೆರೆಯಲಾಗಿದೆ. 21,773 ಮತಗಟ್ಟೆ ಅಧಿಕಾರಿಗಳು ಚುನಾವಣಾ ಕಾರ್ಯ ನಿರ್ವಹಿಸಲಿದ್ದಾರೆ. 7,260 ಪ್ರಿಸೈಡಿಂಗ್ ಅಧಿಕಾರಿಗಳು,27 ಜನ ವೀಕ್ಷಕರು ಸೇರಿದಂತೆ ಒಟ್ಟು 29,100 ಸಿಬ್ಬಂದಿ ಭಾನುವಾರದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮತದಾನ ಎಲ್ಲರ ಹಕ್ಕು, ಎಲ್ಲರೂ ಮತದಾನ ಮಾಡಬೇಕು ಎಂದು ಮೀನಾ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X