ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸವಣೂರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಸೈಕಲ್

By * ಚಂದ್ರಶೇಖರ ಬಿ., ಸವಣೂರ
|
Google Oneindia Kannada News

Basavaraj Bommai distributes bicycle to students in Savanur taluk
ಸವಣೂರ, ಮಾ. 28 : ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ಬಹುಪಾಲು ನೀಗಿಸಲಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾಗಿದ್ದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಸಂಜೆ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ತವರಮೆಳ್ಳಿ ಗ್ರಾಮದ ಹಾಜಿ ಮರ್ದಾನಸಾಬ ನದಾಫ್ ಪ್ರೌಢಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಕೈಗೊಂಡ ಅವರು, ಬರಲಿರುವ ವರ್ಷಗಳಲ್ಲಿ ವಿದ್ಯಾರ್ಥಿನಿಲಯಗಳಲ್ಲಿರುವ ಮಕ್ಕಳಿಗೂ ಸೈಕಲ್ ನೀಡಲು ಸರಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ತಾಲೂಕಿನಾಧ್ಯಂತ 1760 ಸೈಕಲ್ ವಿತರಣೆ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳೂ ಉತ್ತಮ ಸೇವೆ ನೀಡುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡುವ ಎಲ್ಲ ಸೌಲಭ್ಯಗಳೂ ಕಡಿಮೆ ಎಂಬ ಭಾವನೆ ಮೂಡುತ್ತಿದೆ ಎಂದು ತಿಳಿಸಿದ ಅವರು, ಎಮ್.ಎನ್ ನದಾಫ್ ಶಾಲೆಗೆ ಎರಡು ಹೆಚ್ಚುವರಿ ಶಾಲಾ ಕೊಠಡಿ ಹಾಗೂ ಕಂಪೌಂಡ್ ಸೌಲಭ್ಯ ನೀಡಲು ಸಮ್ಮತಿಸಿದರು.

ತಾಲೂಕಿನ ಮಕ್ಕಳಿಗೆ ತಾಂತ್ರಿಕ ಶಿಕ್ಷಣ ನೀಡುವ ಉದ್ದೇಶದಿಂದ ಎನ್.ಟಿ.ಟಿ.ಎಫ್ ಕೇಂದ್ರವನ್ನು ಆರಂಭಿಸಲಾಗಿದ್ದು, ಅತ್ಯಂತ ಅಲ್ಪಾವಧಿಯಲ್ಲಿಯೇ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ತರಬೇತಿ ಹೊಂದಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗಾವಕಾಶ ಲಭಿಸಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅನ್ವಯ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಕೆ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಎಸ್.ಬಿ ಸಂಕಣ್ಣನವರ್, ಮುಖಂಡ ಡಿ.ಎಸ್ ಮಾಳಗಿ, ಶಾಲಾ ಸಮೀತಿ ಅಧ್ಯಕ್ಷ ಇಸ್ಮಾಯಿಲಸಾಬ ನದಾಫ್, ಉಪಾಧ್ಯಕ್ಷ ಬಾಪುಗೌಡ ಪಾಟೀಲ, ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮವ್ವ ಹರಿಜನ್, ಕ್ಷೇತ್ರಶಿಕ್ಷಣಾಧಿಕಾರಿ ಎಮ್.ಡಿ ಬಳ್ಳಾರಿ, ಎ.ಸಿ ಹಿರೇಮಠ, ಶಿವಪ್ರಸಾದ ಸುರಗೀಮಠ, ವಿರೂಪಾಕ್ಷಯ್ಯ ಹಿರೇಮಠ, ರುದ್ರಗೌಢ ಪಾಟೀಲ, ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್ ರಂಗಸ್ವಾಮಿ ಸೇರಿದಂತೆ ಗ್ರಾಮ ಶಿಕ್ಷಣ ಸಮೀತಿಯ ಸರ್ವ ಸದಸ್ಯರು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X