ಆಕ್ರಮ ಆಸ್ತಿ ಗಳಿಕೆ : ಲಾಲುಗೆ ಕ್ಲೀನ್ ಚಿಟ್
ನವದೆಹಲಿ,
ಏ. 1 : ಸಾವಿರಾರು ಕೋಟಿ ರೂಪಾಯಿಗಳ ಮೇವು ಹಗರಣದಲ್ಲಿ ನಿರ್ದೋಷಿಯಾಗಿದ್ದ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ. ಈ ಸಂಬಂಧ ಬಿಹಾರ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಸರಕಾರಕ್ಕೆ ಈ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ. id="toptextpromo"> ತೀರ್ಪು ಹೊರಬಿದ್ದ ನಂತರ ಪ್ರತಿಕ್ರಿಯೆ ನೀಡಿದ ಲಾಲು, ನನಗೆ ನ್ಯಾಯಾಂಗದಲ್ಲಿ ಸಂಪೂರ್ಣ ವಿಶ್ವಾಸವಿದೆ. ನನ್ನ ಪ್ರಾಮಾಣಿಕತೆಗೆ ಜಯ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಬಿಹಾರದ ಮುಖ್ಯಮಂತ್ರಿಗಳಾಗಿದ್ದ ಲಾಲೂ ಮತ್ತು ಅವರ ಪತ್ನಿ ರಾಬ್ರಿ ದೇವಿ ಇಬ್ಬರ ವಿರುದ್ಧವೂ ಅಕ್ರಮ ಆಸ್ತಿ ಗಳಿಕೆ ಆರೋಪ ಹೊರಿಸಲಾಗಿತ್ತು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂದು ಅವರಿಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿತ್ತು. id='are-slot-1' class='oiad oi-axt oiadv'> id='top-searched-articles'> ಈ ಪ್ರಕರಣದಲ್ಲಿ ಕೇಂದ್ರ ಸರಕಾರ ಮತ್ತು ಸಿಬಿಐ ಮಾತ್ರ ಮೇಲ್ಮನವಿ ಸಲ್ಲಿಸಲು ಅಧಿಕಾರ ಹೊಂದಿದೆ. ರಾಜ್ಯ ಸರಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್, ಆರ್.ಎಂ. ಲೋಧಾ ಮತ್ತು ಬಿ.ಎಸ್ ಚೌಹಾನ್ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.











Click it and Unblock the Notifications