ನವದೆಹಲಿಯ ಆದಾಯ ತೆರಿಗೆ ಕಚೇರಿಗೆ ಬೆಂಕಿ

ಆದಾಯ ತೆರಿಗೆ ಕಚೇರಿಯ ನಾಲ್ಕನೇ ಮಹಡಿಯ D ಆಕಾರದ ಕಟ್ಟಡದಲ್ಲಿ ಇಂದು ಬೆಳಗ್ಗೆ 11.15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಹತ್ತಿರದಲ್ಲೆ ಕೆಲ ಕಾರ್ಮಿಕರು ಮರಗೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸುಮಾರು 16 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಬೆಂಕಿ ಅನಾಹುತಕ್ಕೆ ಸರಿಯಾದ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.












Click it and Unblock the Notifications