ಏಪ್ರಿಲ್ 5ರಂದು ಮದ್ಯ ಮಾರಾಟ ನಿಷೇಧ
ಬೆಂಗಳೂರು,
ಏ. 4 : ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಚುನಾವಣೆ ಮತ ಎಣಿಕೆಯನ್ನು ಶಾಂತಿಯುತವಾಗಿ, ಸುವ್ಯವಸ್ಥಿವಾಗಿ ಹಾಗೂ ಸುಗಮವಾಗಿ ನಡೆಸುವ ಸಲುವಾಗಿ ಅಬಕಾರಿ ಕಾಯಿದೆಯನ್ವಯ ಏಪ್ರಿಲ್ 5ರ ಬೆಳಿಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಲಾಗಿದೆ. id="toptextpromo">ಆದ್ದರಿಂದ
ಏಪ್ರಿಲ್ 5 ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಹಾಗೂ ಸರಬರಾಜಾಗದಂತೆ ಕಟ್ಟೆಚ್ಚರವಹಿಸಬೇಕೆಂದು ಆದೇಶಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಜಿಲ್ಲೆಯ
ಕಾರ್ಯನಿರ್ವಾಹಕರು ಅಬಕಾರಿ ಸಿಬ್ಬಂದಿಗಳು ನಗರದಾದ್ಯಂತ ಸಂಚರಿಸಿ ಗಸ್ತು ತಿರುಗಿ ಯಾವುದೇ ರೀತಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗದಂತೆ ಕಟ್ಟೆಚ್ಚರವಹಿಸಲಿದ್ದಾರೆ. ಈ ಕಾರ್ಯದಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಉಪ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.











Click it and Unblock the Notifications