ಹೈಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಗುಲ್ಬರ್ಗ,
ಏ. 6 : ಕೇಂದ್ರ ಸರಕಾರ ಮುಂಬರುವ ಬಜೆಟ್ ಅಧಿವೇಶನದಲ್ಲಿ 371 (ಡಿ) ನೇ ವಿಧಿ ತಿದ್ದುಪಡಿಗೆ ಮುಂದಾಗದಿದ್ದಲ್ಲಿ ಪ್ರತ್ಯೇಕ ರಾಜ್ಯ ಬೇಡಿಕೆಗೆ ಹೋರಾಟ ಚುರುಕುಗೊಳಿಸಲು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ನಿರ್ಧರಿಸಿದೆ. id="toptextpromo"> ಈ ನಿಟ್ಟಿನಲ್ಲಿ ರಾಜ್ಯ ವಿಧಾನಮಂಡಲದಲ್ಲಿ ಸರಕಾರ ಕೈಗೊಂಡಿರುವ ನಿರ್ಣಯಕ್ಕೆ ಕೇಂದ್ರ ಬೆಲೆ ಕೊಡಬೇಕೆಂದು ಜಿಲ್ಲಾಸಮಿತಿ ಸಭೆಯಲ್ಲಿ ಸೋಮವಾರ (ಏ.5) ನಿರ್ಣಯ ಕೈಗೊಳ್ಳಲಾಯಿತು. ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಮಾತನಾಡಿ, ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕೈಗೊಂಡಿರುವ ನಿರ್ಣಯದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರದ ಬಳಿ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'> ನಮ್ಮ ಮನವಿಗೆ ಕೇಂದ್ರ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ. ಜೂನ್ ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಬಹುದು. ಲೋಕಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬಿಸಿದೆ ಎಂದು ಪಾಟೀಲ್ ಎಚ್ಚರಿಸಿದ್ದಾರೆ.











Click it and Unblock the Notifications