• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜನರಿಗೆ ಪಶ್ಚಾತ್ತಾಪ ಆಗಲಿದೆ

By Mrutyunjaya Kalmat
|

ಬೆಂಗಳೂರು, ಏ. 6 : ಬಿಜೆಪಿ ಸರಕಾರದ 23 ತಿಂಗಳ ಆಡಳಿತ ನೋಡಿದ ನಂತರವೂ ಜನತೆ ಅದೇ ಪಕ್ಷಕ್ಕೆ ಮತ ನೀಡುತ್ತಾರೆ ಎಂದರೆ ಆಶ್ಚರ್ಯವಾಗುತ್ತಿದೆ. ಜನರಿಗೆ ಪಶ್ಚಾತ್ತಾಪ ಆಗುವ ತನಕ ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಬಗ್ಗೆ ಮೊದಲಿನಿಂದಲೂ ಅಪಪ್ರಚಾರ ಹೆಚ್ಚಾಗಿ ನಡೆದಿದೆ. ಈ ಚುನಾವಣೆಯಲ್ಲೂ ಅದೇ ಮುಂದುವರಿಯಿತು. ಇದರಿಂದಾಗಿ ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳು ಜನರ ಕಣ್ಣಿಗೆ ಬೀಳದಿರುವುದು ವಿಷಾದಕರ ಎಂದರು.

ಬಿಜೆಪಿಯ ಬಗ್ಗೆ ಜನರಿಗೆ ಇನ್ನೂ ನಂಬಿಕೆ ಇದೆಯೇ ಅಥವಾ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂಬುದು ತಿಳಿಯುತ್ತಿಲ್ಲ. ಬಿಜೆಪಿ ಬೆಂಗಳೂರಿನ ಅಭಿವೃದ್ಧಿಗೆ ಅದ್ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದನ್ನು ಮುಂದೆ ನೋಡುತ್ತೇವೆ. ಜನರಿಗೆ ತಮ್ಮ ತಪ್ಪಿನ ಅರಿವಾಗುತ್ತದೆ. ಒಟ್ಟಿನಲ್ಲಿ ಜನತೆ ನೀಡಿದ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X