ಏಪ್ರಿಲ್ ಮೇನಲ್ಲಿ ಕರೆಂಟು ಹೋಗದಣ್ಣಾ

ಸೋಮವಾರ ಬೆಂಗಳೂರು ಬಿಜೆಪಿಗೆ ಸುದಿನ. ಬಿಬಿಎಂಪಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿದ ನಂತರ ತಮ್ಮ ಸಂತಸ ಹಂಚಿಕೊಂಡ ಯಡಿಯೂರಪ್ಪ, ಬೆಂಗಳೂರಿನ ಮೇಲೆ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ ಎಂದು ಬಾಯಿಮಾತಿನ ಭರವಸೆ ಕೊಟ್ಟಿದ್ದಾರೆ.
ಗ್ರಾಮೀಣ ಭಾಗಕ್ಕೆ 12 ಗಂಟೆಗಳ ಕಾಲ ವಿದ್ಯುತ್ ನೀಡಲಿದ್ದು ಆರು ಗಂಟೆಗಳ ಕಾಲ ಮೂರು ಫೇಸ್ ಮತ್ತು ಆರು ಗಂಟೆಗಳ ಕಾಲ ಸಿಂಗಲ್ ಫೇಸ್ ವಿದ್ಯುತ್ ನೀಡುವುದಾಗಿಯೂ ಅವರು ಹೇಳಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗುವುದು. ಈ ಸಂಬಂಧ ಇಂಧನ ಇಲಾಖೆಯ ಅಧಿಕಾರಿಗಳ ಜೊತೆ ಮೂರು ಗಂಟೆಗಳ ಕಾಲ ಚರ್ಚೆ ನಡೆಸಿರುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.












Click it and Unblock the Notifications