ರಜೆ ಮೇಲೆ ತೆರಳಲು ದಿನಕರನ್ ನಕಾರ?
ಬೆಂಗಳೂರು,
ಏ.6: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಡಿ.ದಿನಕರನ್ ಅವರ ಸುತ್ತ ವಿವಾದಗಳ ಹುತ್ತ ದಿನೇ ದಿನೇ ಬೆಳೆಯುತ್ತಲೇ ಇದೆ. ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ಅವರ ನೇತೃತ್ವದ ಸಮಿತಿ ದಿನಕರನ್ ಅವರಿಗೆ ರಜೆ ಮೇಳೆ ತೆರೆಳುವಂತೆ ಆದೇಶಿಸಿದ್ದರೂ ದಿನಕರ್ನ್ ಅವರು ನ್ಯಾಯಾಲಯದಲ್ಲಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. id="toptextpromo">ತಮ್ಮ
ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಕುರಿತು ಸುಪ್ರೀಂಕೋರ್ಟ್ ಯಾವುದೇ ಅಧಿಕೃತ ಸೂಚನೆ ನೀಡಿಲ್ಲ ಎಂದು ದಿನಕರನ್ ಸ್ಪಷ್ಟಪಡಿಸಿದ್ದಾರೆ. ಭೂಕಬಳಿಕೆ, ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಮುಂತಾದ ಆರೋಪಗಳ ಹಿನ್ನೆಲೆಯಲ್ಲಿ ದಿನಕರನ್ ಅವರನ್ನು ರಜೆ ಮೇಲೆ ತೆರಳುವಂತೆ ಸೂಚಿಸಿ, ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಅವರನ್ನು ದಿನಕರನ್ ಅವರ ಸ್ಥಾನದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಹೆಸರಿಸಲಾಗಿತ್ತು. id='are-slot-1' class='oiad oi-axt oiadv'> id='top-searched-articles'>ಒಂದು
ವೇಳೆ ಮುಖ್ಯ ನ್ಯಾಯಮೂರ್ತಿ ಅವರು ರಜೆ ಮೇಲೆ ತೆರಳಿದರೆ ಮಾತ್ರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅವರು ಅಧಿಕಾರ ವಹಿಸಿಕೊಳ್ಳಲು ಸಾಧ್ಯ. ಆದರೆ, ದಿನಕರನ್ ಅವರು ನ್ಯಾಯಮೂರ್ತಿಗಳ ಸಮಿತಿ ನೀಡಿದ್ದ ಸೂಚನೆಯನ್ನು ನಿರಾಕರಿಸಬಹುದು ಎಂದು ಹಿರಿಯ ವಕೀಲ ಶಾಂತಿಭೂಷಣ್ ಅಭಿಪ್ರಾಯಪಟ್ಟಿದ್ದಾರೆ.











Click it and Unblock the Notifications