ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಸಿಎಂ
ದಾವಣಗೆರೆ,
ಏ.6: ಬಿಬಿಎಂಪಿ ಚುನಾ ವಣೆ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಊಹಾಪೋಹ ಸುದ್ದಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಹರಿಹರದ ಹೆಲಿ ಪ್ಯಾಡ್ ಬಳಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದರು. id="toptextpromo">ಗ್ರಾಮ
ಪಂಚಾಯಿತಿ ಚುನಾವಣೆ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ದೊರೆಯಲಿದ್ದು, ಏ.15ರೊಳಗೆ ಚುನಾವಣಾ ವೇಳಾಪಟ್ಟಿ ಘೋಷಿಸುವ ಸಾಧ್ಯತೆಯಿದೆ. ಮೇ.15ರೊಳಗೆ ಚುನಾವಣೆ ಕಾರ್ಯ ಸಂಪೂರ್ಣಗೊಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷಾತೀತವಾಗಿ ವಿಭಾಗಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಾಗೃತಿ ಸಮ್ಮೇಳನ ದಾವಣಗೆರೆಯಿಂದಲೇ ಆರಂಭವಾಗಲಿದೆ ಎಂದರು. id='are-slot-1' class='oiad oi-axt oiadv'> id='top-searched-articles'>ವಾಯುಶಕ್ತಿ
ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಉತ್ಪಾದಿತ ವಿದ್ಯುತ್ಛಕ್ತಿಯನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ತಡೆಗಟ್ಟಲು ಗೆಜೆಟ್ ಸುತ್ತೋಲೆಯನ್ನು ಹೊರಡಿಸಲಾಗಿದೆ. ಇದರಿಂಗಾಗಿ ರಾಜ್ಯಕ್ಕೆ 600 ಮೆ.ವ್ಯಾ ಅಧಿಕ ವಿದ್ಯುತ್ ದೊರೆಯಲಿದೆ. ವಿದ್ಯುತ್ ಸಮಸ್ಯೆ ನೀಗಿಸಲು ಸರ್ಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.











Click it and Unblock the Notifications