ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಡವರಿಗೆ ವರವಾದ ಸಾಮೂಹಿಕ ವಿವಾಹ

By *ಚಂದ್ರಶೇಖರ್ ಬಿ., ಸವಣೂರ
|
Google Oneindia Kannada News

ಸವಣೂರ,ಏ.8 : ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಒಂದು ಸಾಮಾಜಿಕ ಜವಾಬ್ದಾರಿಯಾಗಿದ್ದು, ದುಂದುವೆಚ್ಚಕ್ಕೂ ಕಡಿವಾಣ ಹಾಕಿದಂತೆ ಆಗುತ್ತದೆ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕ್ಕೀರಸಿದ್ದರಾಮ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಕಡಕೋಳ ಗ್ರಾಮದಲ್ಲಿ ಎರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿಕೊಂಡಿದ್ದ ಶ್ರೀಗಳು, ಕಡಕೋಳ ಗ್ರಾಮಸ್ಥರ ಸಾಮಾಜಿಕ ಹಾಗೂ ಧಾರ್ಮಿಕ ಕಳಕಳಿ ಅನ್ಯರಿಗೂ ಅನುಕರಣೀಯ ಎಂದರು.

ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಬಡಜನತೆಯ ಮಕ್ಕಳ ವಿವಾಹಕ್ಕೆ ಹೆಚ್ಚು ಅನುಕೂಲವಾಗುತ್ತದೆ. ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುತ್ತದೆ. ಸಮಾಜದಲ್ಲಿ ಸಮಾನತೆ, ಸಹಬಾಳ್ವೆಯನ್ನು ತರಲು ಸಹಾಯಕಾರಿಯಾಗುತ್ತದೆ ಎಂದು ತಿಳಿಸಿದ ಶ್ರೀಗಳು, ಪ್ರತಿಯೊಬ್ಬ ಸ್ಥಿತಿವಂತರೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳ ಬಗ್ಗೆ ಆಸಕ್ತಿ ವಹಿಸಬೇಕು ಎಂದರು.

ಕಡಕೋಳ ಗ್ರಾಮದಲ್ಲಿ ಸತತ 21 ದಿನಗಳ ಕಾಲ ಪ್ರವಚನ ನೀಡಿದ ಬಾಲೆಹೊಸೂರಿನ ದಿಂಗಾಲೇಶ್ವರಮಠದ ಶ್ರೀ ಕುಮಾರ ದಿಂಗಾಲೇಶ್ವರ ಶ್ರೀಗಳು, ಗೃಹಸ್ಥಾಶ್ರಮ ಜೀವನ ಅತ್ಯಂತ ಪವಿತ್ರವಾದುದ್ದು, ಪ್ರತಿಯೊಂದು ಕುಟುಂಬಗಳೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಜೀವನ ಮಾಡಬೇಕು. ಅವಲಂಬಿತರನ್ನು ಸಂರಕ್ಷಣೆ ಮಾಡಬೇಕು ಎಂದರು. ಗುಳೇದಗುಡದ ಶ್ರೀ ಒಪ್ಪತೇಶ್ವರ ಮಹಾಸ್ವಾಮಿಗಳು, ಅಕ್ಕಿಆಲೂರಿನ ವಿರಕ್ತಮಠದ ಶ್ರೀ ಶಿವಬಸವ ದೇವರು, ಹಂದಿಗನೂರಿನ ಶ್ರೀ ಚನ್ನವೀರಸ್ವಾಮಿಗಳು ಸೇರಿದಂತೆ ಹಲವಾರು ಮಠಾಧೀಶರು ನವ ದಂಪತಿಗಳಿಗೆ ಶುಭ ಹಾರೈಸಿ, ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶಾಸಕ ನೇಹರು ಓಲೇಕಾರ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರಾಮಣ್ಣ ಕಳಸದ, ಗ್ರಾ.ಪಂ.ಅಧ್ಯಕ್ಷ ನಾಗೇಶ ದೊಡ್ಡಮನಿ, ಗ್ರಾಮದ ಪ್ರಮುಖರಾದ ಶಿದ್ದಪ್ಪ ಗುಂಜಳ, ಭರಮಪ್ಪ ದೊಡ್ಡಮನಿ, ತಿಪ್ಪಣ್ಣ ಸುಬ್ಬಣ್ಣನವರ, ಸುರೇಶ ಗುಜ್ಜರಿ, ವೀರಬಸಪ್ಪ ಅರಳಿ, ಬಸವರಾಜ ಡೊಂಕಣ್ಣನವರ ಸೇರಿದಂತೆ ಹಲವಾರು ಪ್ರಮುಖರು ಕಲ್ಮೇಶ್ವರ ಸೇವಾ ಸಮೀತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದಲ್ಲಿ 48 ಜೋಡಿ ನೂತನ ವಧು-ವರರು ಹೊಸ ಜೀವನಕ್ಕೆ ಕಾಲಿಟ್ಟರು. ಕಡಕೋಳ ಗ್ರಾಮದ ಗಣ್ಯರು, ನಾಗರಿಕರು ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X