ಮೆಟ್ರೋ ಮ್ಯಾನ್ ಶ್ರೀಧರನ್ ಆಸ್ಪತ್ರೆಗೆ ದಾಖಲು
ನವದೆಹಲಿ,
ಏ.8: ಭಾರತದ 'ಮೆಟ್ರೊ ಮ್ಯಾನ್' ಎಂದೇ ಖ್ಯಾತರಾದ ಇ ಶ್ರೀಧರನ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಚಿಕಿತ್ಸೆಗಾಗಿ ಬುಧವಾರ(ಏ.7) ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೊಲೋ ಆಸ್ಪತ್ರೆಯ ನಾನಾ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. id="toptextpromo">ಇ
ಶ್ರೀಧರನ್ (77) ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಸುಮಾರು ಬೆಳಗ್ಗೆ 9 ಗಂಟೆ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಎದೆನೋವು
ಕಾಣಿಸಿಕೊಂಡಾಗ ಶ್ರೀಧರನ್ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿದ್ದರು. ಉದ್ಯೋಗ ನಿಮಿತ್ತ ಅವರು ಕೋಲ್ಕತ್ತಾಗೆ ಹೊರಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ. ಸದ್ಯಕ್ಕೆ ಶ್ರೀಧರನ್ ಅವರ ಆರೋಗ್ಯ ಪರಿಸ್ಥಿತಿ ಉತ್ತಮವಾಗಿದ್ದು ಕೆಲವು ಮೆಟ್ರೋ ಅಧಿಕಾರಿಗಳು ಅವರನ್ನು ಭೇಟಿ ಮಾಡಿ ಆರೋಗ್ಯ ಸ್ಥಿತಿ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.











Click it and Unblock the Notifications