ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ನಿರುದ್ಯೋಗ ಪರ್ವಕ್ಕೆ ಕೊನೆ

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

Keonics new industrial park in Machenahalli
ಶಿವಮೊಗ್ಗ, ಏ. 10 : ಕಿಯೋನಿಕ್ಸ್ ಘಟಕವು ಮಾಚೇನಹಳ್ಳಿ ಕೈಗಾರಿಕಾ ವಲಯದ 36 ಎಕರೆ ಪ್ರದೇಶದಲ್ಲಿ ನೂತನ ಕೈಗಾರಿಕಾ ಘಟಕವನ್ನು ಆರಂಭಿಸಲಿದೆ ಎಂದು ಕಿಯೋನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅರವಿಂದ ಜನ್ನು ಹೇಳಿದ್ದಾರೆ.

ಅವರು ಶುಕ್ರವಾರ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. 67,599 ಚ.ಅ.ಯಲ್ಲಿ ಅತ್ಯಾಧುನಿಕ ಸೌಕರ್ಯ ಹೊಂದಿದ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಅದಕ್ಕಾಗಿ 12.73 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದೆಂದರು.

ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಲಕ್ಷ್ಮಿ ನಿರ್ಮಾಣ ಸಂಸ್ಥೆಗೆ ವಹಿಸಿದ್ದು, ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ಆರಂಭಗೊಳ್ಳುವ ಐಟಿ ಮತ್ತು ಎಲೆಕ್ಟ್ರಾನಿಕ್ ಹಾರ್‍ಡ್‌ವೇರ್ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಸ್ಥಳೀಯ 5ರಿಂದ 6 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಲಭ್ಯವಾಗಲಿದೆ ಎಂದರು.

ರಾಜ್ಯಾದ್ಯಂತ ಕೈಗಾರಿಕಾ ಬೆಳವಣಿಗೆಯ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಜಾರಿಗೆ ತಂದಿರುವ ಹೊಸ ಕೈಗಾರಿಕಾ ನೀತಿಯನ್ವಯ ಬೆಂಗಳೂರು ಹೊರತುಪಡಿಸಿ ಶಿವಮೊಗ್ಗ ಸೇರಿದಂತೆ ಮಂಗಳೂರು, ಮೈಸೂರು ಮತ್ತು ಗುಲಬರ್ಗಾಗಳಲ್ಲಿ ಕೈಗಾರಿಕಾ ಘಟಕಗಳನ್ನು ಆರಂಭಿಸಲಾಗುವುದು ಎಂದರು.

ಈ ಕೈಗಾರಿಕಾ ಘಟಕಗಳಿಗೆ ಸರ್ಕಾರ 2009-10ನೇ ಸಾಲಿನಲ್ಲಿ 10 ಕೋಟಿ ರೂ.ಗಳ ಷೇರು ಬಂಡವಾಳ ಹೂಡಿದೆ ಎಂದ ಅವರು, ಕೇಂದ್ರದ ವಾಣಿಜ್ಯ ಮಂತ್ರಾಲಯವು ಪ್ರಾಥಮಿಕ ಹಂತದ ಮಾಹಿತಿ ನೀಡಿದೆ ಎಂದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಎ.ಯಂಗಾರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿನಾರಾಯಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X