ಬುರ್ಕಾ ವಿವಾದ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪ್ರತಿಭಟನೆ
ಮಂಗಳೂರು,
ಏ.10: ಬುರ್ಕಾ ತೊಟ್ಟು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಪರ ನಿಂತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ ಐ) ಸಂಘಟನೆಗೆ ಬೆಂಬಲ ವ್ಯಕ್ತಪಡಿಸಿ ಮಂಗಳೂರಿನಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. id="toptextpromo">ಇಲ್ಲಿನ
ಗಣಪತಿ ಪ್ರೌಢಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಬುರ್ಕಾ ತೊಟ್ಟು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದರು. ಬುರ್ಕಾ ತೆಗೆದು ಪರೀಕ್ಷೆ ಬರೆಯುವಂತೆ ಪರೀಕ್ಷಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆಜ್ಞಾಪಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಬಂಧಿಸಲಾಗಿತ್ತು. ಈ ಸಂಬಂಧ ಸಿಎಫ್ ಐ ಸಂಘಟನೆಯ ಮುಖಂಡರು ಬುರ್ಕಾ ತೊಟ್ಟ ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರತಿಭಟಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. id='are-slot-1' class='oiad oi-axt oiadv'> id='top-searched-articles'>ಈ
ಸಂಬಂಧ ಶುಕ್ರವಾರ ವಿದ್ಯಾರ್ಥಿಗಲು ಬೀದಿಗೆ ಇಳಿದು ಜಿಲ್ಲಾಧಿಕಾಧಿಗಳ ಕಚೇರಿ ಎದುರು ಪ್ರತಿಭಟಿಸಿದರು. ಸರ್ಕಲ್ ಇನ್ಸ್ ಪೆಕ್ಟರ್ ವಿನಯ್ ಗೋಂವ್ಕರ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ಪರೀಕ್ಷಾಧಿಕಾರಿಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳವ ಭರವಸೆಯನ್ನು ನೀಡಿದ್ದಾರೆ.











Click it and Unblock the Notifications