ಮಂಗಳವಾರ ಮೇಯರ್ ಆಯ್ಕೆ : ಕಟ್ಟಾ
ಬೆಂಗಳೂರು,
ಏ. 11 : ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಮಂಗಳವಾರ ಸಂಜೆಯೊಳಗೆ ಅವಿರೋಧ ಆಯ್ಕೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು. id="toptextpromo"> ರಾಷ್ಟ್ರೀಯ ಭೂಮಾಪಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಅನಂತಕುಮಾರ್ ಹಾಗೂ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಅವರೊಂದಿಗೆ ಸಮಾಲೋಚಿಸಿ ಮೇಯರ್ ಹುದ್ದೆಗೆ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದರು. id='are-slot-1' class='oiad oi-axt oiadv'> id='top-searched-articles'>ಮೇಯರ್
ಸ್ಥಾನ ಆಕಾಂಕ್ಷಿಗಳಲ್ಲಿ ಮೂರಕ್ಕೂ ಹೆಚ್ಚು ಮಂದಿ ಇದ್ದು, ಇವರೆಲ್ಲ ನಿಪುಣರು, ಬುದ್ಧಿವಂತರು ಮತ್ತು ಅನುಭವಿಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಪೈಕಿ ಒಬ್ಬರನ್ನು ಅವಿರೋಧ ಆಯ್ಕೆ ಮಾಡಲಾಗುವುದು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದು, ಯಾವುದೇ ಗೊಂದಲವಿಲ್ಲದೆ ಆಯ್ಕೆ ನಡೆಯಲಿದೆ ಎಂದು ಕಟ್ಟಾ ವಿವರಿಸಿದರು.











Click it and Unblock the Notifications