ಗೋಹತ್ಯೆ ಕಾಯ್ದೆ ಹಿಂದೆ ದೊಡ್ಡ ಸಂಚಿದೆ
ಬೆಂಗಳೂರು,
ಏ. 11 : ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕೆಂದು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಂ ಎಫ್ ಸಾಲ್ಡಾನಾ ಮನವಿ ಮಾಡಿದ್ದಾರೆ. id="toptextpromo"> ಟ್ರಾನ್ಸ್ ಪರನ್ಸಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ನಗರದಲ್ಲಿ ಇಂದು ಏರ್ಪಡಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆ ಕುರಿತ ವಿಚಾರ ಸಂಕಿರರಣದಲ್ಲಿ ಅವರು ಮಾತನಾಡುತ್ತಿದ್ದರು. ಅಲ್ಪಸಂಖ್ಯಾತರ ಆಹಾರ ಹಕ್ಕಿಗೆ ಗೋಹತ್ಯೆ ನಿಷೇಧ ಕಾಯ್ದೆ ಮಾರಕವಾಗಲಿದೆ ಎಂದು ಅಭಿಪ್ರಾಯಪಟ್ಟರು. ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯಂತಹ ಶಾಸನಗಳು ಜಾರಿಗೊಳಿಸುವ ಮೂಲಕ ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ಮುಂದಾಗಿದೆ. ಇದಕ್ಕೆ ರಾಜ್ಯಪಾಲರು ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡರು. id='are-slot-1' class='oiad oi-axt oiadv'> id='top-searched-articles'> ಒಂದು ವರ್ಗದ ಜನರ ಒಲೈಕೆಗಾಗಿ ಅಲ್ಪಸಂಖ್ಯಾತರ ಆಹಾರ ಪದ್ಧತಿಗೆ ಧಕ್ಕೆ ತರುವುದು ಸೂಕ್ತವಲ್ಲ. ಈ ಕಾಯ್ದೆ ಜಾರಿಯಾದರೆ ರಾಜ್ಯದ ಜನಸಂಖ್ಯೆಯ ಶೇ.60 ಮಂದಿಗೆ ಅನ್ಯಾಯವಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದೆ ಅಂತಾರಾಷ್ಟ್ರೀಯ ಮಾಂಸ ಮಾರಾಟ ಕಂಪನಿಗಳ ಕೈವಾಡವೂ ಇದೆ ಎಂದು ಸಾಲ್ಡಾನಾ ಆರೋಪಿಸಿದರು.











Click it and Unblock the Notifications