ರೆಸಿಡೆನ್ಸಿ ರಸ್ತೆ : ಕೊನಾರ್ಕ್ ಹೋಟೆಲ್ ನಲ್ಲಿ ಬೆಂಕಿ
ಬೆಂಗಳೂರು,
ಏ. 12 : ನಗರದ ಜನನಿಬಿಡ ರೆಸಿಡೆನ್ಸಿ ರಸ್ತೆಯಲ್ಲಿರುವ ಕೊನಾರ್ಕ್ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. id="toptextpromo"> ಹೋಟೆಲ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇತರ ಇತರ ಮಹಡಿಗಳಿಗೂ ವ್ಯಾಪಿಸಲು ಆರಂಭಿಸಿದೆ. ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. id='are-slot-1' class='oiad oi-axt oiadv'> id='top-searched-articles'> ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಹೋಟೆಲ್ ನಲ್ಲಿರುವ ಎಲ್ಲರನ್ನು ಹೊರಕ್ಕೆ ಕಳುಹಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಹೋಟೆಲ್ ನ ಮೂರನೇ ಮಹಡಿಯಲ್ಲಿ ದಟ್ಟವಾದ ಹೊಗೆ ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.











Click it and Unblock the Notifications