ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೆಸಿಡೆನ್ಸಿ ರಸ್ತೆ : ಕೊನಾರ್ಕ್ ಹೋಟೆಲ್ ನಲ್ಲಿ ಬೆಂಕಿ
ಹೋಟೆಲ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇತರ ಇತರ ಮಹಡಿಗಳಿಗೂ ವ್ಯಾಪಿಸಲು ಆರಂಭಿಸಿದೆ. ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಹೋಟೆಲ್ ನಲ್ಲಿರುವ ಎಲ್ಲರನ್ನು ಹೊರಕ್ಕೆ ಕಳುಹಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಹೋಟೆಲ್ ನ ಮೂರನೇ ಮಹಡಿಯಲ್ಲಿ ದಟ್ಟವಾದ ಹೊಗೆ ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
Comments
Story first published: Monday, April 12, 2010, 15:08 [IST]