ಏ.15ಕ್ಕೆ ನೀರಿನ ದರ ನಿಗದಿ, ಯಡಿಯೂರಪ್ಪ
ಬೆಂಗಳೂರು,
ಏ. 12 : ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಸಂಬಂಧ ಇದೇ 15 ರಂದು ರಾಜ್ಯ ಸರಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. id="toptextpromo"> ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ನೀರಿನ ದರ ಏರಿಕೆ ಕುರಿತ 15 ರಂದು ಬೆಂಗಳೂರು ಜಲಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಇತರ ಪ್ರಮುಖರೊಂದಿಗೆ ಚರ್ಚಿಸಲಾಗುವುದು ಎಂದರು. ಕುಡಿಯುವ ನೀರಿನ ದರ ಏರಿಕೆಗೆ ಸಂಬಂಧಪಟ್ಟ ಇಲಾಖೆಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಅವರು ಹೇಳಿದರು. id='are-slot-1' class='oiad oi-axt oiadv'> id='top-searched-articles'> ಪ್ರಸ್ತಕ ಪರಿಸ್ಥಿತಿಯಲ್ಲಿ ದರ ಏರಿಕೆಯ ಅನಿವಾರ್ಯತೆಯನ್ನು ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಕಳೆದ ಹಲವಾರು ವೇದಿಕೆಗಳಲ್ಲಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ನಗರದಲ್ಲಿ 2001ರಿಂದ ನೀರಿನ ದರ ಹೆಚ್ಚಿಸಿಲ್ಲ. ನೀರು ಪೂರೈಸಲು ಮಂಡಳಿಗೆ ಪ್ರತಿ ತಿಂಗಳು 75.5 ಕೋಟಿ ರುಪಾಯಿ ವೆಚ್ಚವಾಗುತ್ತದೆ. ಆದರೆ, ಗ್ರಾಹಕರಿಂದ ಸಂಗ್ರಹವಾಗುವ ಮೊತ್ತ ಬರೀ 38 ಕೋಟಿ ರುಪಾಯಿ. ಮಂಡಳಿಯು ಪ್ರತಿ ತಿಂಗಳು 37 ಕೋಟಿ ರುಪಾಯಿ ನಷ್ಟ ಅನುಭವಿಸುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಯಡಿಯೂರಪ್ಪ ಹೇಳಿದರು.











Click it and Unblock the Notifications