ಮೇ 8, 12 ಕ್ಕೆ ಗ್ರಾಪಂ ಚುನಾವಣೆ
ಬೆಂಗಳೂರು,
ಏ. 12 : ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮೇ 8 ಮತ್ತು 12ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದ 5574 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ ಮತ್ತು ಮೇ 17ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ. id="toptextpromo"> ಮೇ 8ರಂದು 16 ಜಿಲ್ಲಾ ವ್ಯಾಪ್ತಿಗಳಲ್ಲಿ ಹಾಗೂ ಮೇ 12ರಂದು 15 ಜಿಲ್ಲಾ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಯುತ್ತದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ರಾಜ್ಯ ಚುನಾವಣಾ ಆಯುಕ್ತ ಸಿ ಆರ್ ಚಿಕ್ಕಮಠ ವಿವರಿಸಿದರು. ಮೇ 8ರಂದು ನಡೆಯುವ ಮೊದಲ ಹಂತದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಲು ಏಪ್ರಿಲ್ 26 ಕಡೆಯ ದಿನ. ಏಪ್ರಿಲ್ 27ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ಏಪ್ರಿಲ್ 29ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಈ ಕುರಿತು ಏಪ್ರಿಲ್ 19ಕ್ಕೆ ಅಧಿಸೂಚನೆ ಹೊರಡಿಸಲಾಗುವುದು. id='are-slot-1' class='oiad oi-axt oiadv'> id='top-searched-articles'> ಮೇ 12ರಂದು ನಡೆಯುವ ಎರಡನೇ ಹಂತದ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನವಾಗಿದ್ದು, ಏಪ್ರಿಲ್ 29ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 3ಕ್ಕೆ ನಾಮಪತ್ರ ಹಿಂದಕ್ಕೆ ಪಡೆಯಲು ಕಡೆಯ ದಿನ. ಇದರ ಅಧಿಸೂಚನೆ ಏಪ್ರಿಲ್ 21ರಂದು ಪ್ರಕಟಗೊಳ್ಳಲಿದೆ. ಮೇ 8 ಮತ್ತು 12ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿದ್ದು, ಮೇ 17ಕ್ಕೆ ಮತ ಎಣಿಕೆ ನಡೆಯುತ್ತದೆ ಎಂದು ಅವರು ಹೇಳಿದರು.











Click it and Unblock the Notifications