ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಸುದ್ದಿ !

By Mahesh
|
Google Oneindia Kannada News

Karnataka govt decides to hike dearness Allowance
ಬೆಂಗಳೂರು, ಏ.12 : ಕೇಂದ್ರ ಸರ್ಕಾರಿ ನೌಕರರಿಗೆ ಶೇ. 8 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದ ಬೆನ್ನಲೇ, ರಾಜ್ಯ ಸರ್ಕಾರ ಕೂಡ ತನ್ನ ನೌಕರರಿಗೆ ಮತ್ತು ಅನುದಾನಿತ ಸಂಸ್ಥೆಗಳ ನೌಕರರಿಗೆ ಅದೇ ಪ್ರಮಾಣದಲ್ಲಿ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಮುಂದಾಗಿದೆ. ಈ ಬಗ್ಗೆ ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳುವ ಸಾಧ್ಯತೆಯಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ಶೇ.5 ರಷ್ಟು ತುಟ್ಟಿ ಭತ್ಯೆ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಶೇ. 5.25 ರಷ್ಟು ನೀಡಿತ್ತು. ಅಂತರಿಕ ವ್ಯತ್ಯಾಸಗಳಿದ್ದರಿಂದ 0.25 ರಷ್ಟು ಹೆಚ್ಚಿಸಿತ್ತು. ಈ ಬಾರಿ ಕೇಂದ್ರ ಸರ್ಕಾರದ ಹೆಚ್ಚಳ ನೀತಿಯನ್ನೇ ಅನುಸರಿಸಿ ರಾಜ್ಯಸರ್ಕಾರ ಕೂಡ ಭತ್ಯೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಸಂಬಂಧದ ಕಡತ ಪ್ರತಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಂಕಿತ ಹಾಕಿದ್ದಾರೆ ಎಂದು ಸುದ್ದಿಯಿದೆ.

ಆದರೆ, ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತುಟ್ಟಿ ಭತ್ಯೆ ಹೆಚ್ಚಳ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ , ಹಾಲಿನ ದರ ಏರಿಕೆಯಿಂದ ಸಿಟ್ಟಾಗಿರುವ ನೌಕರರಿಗೆ ಸಮಾಧಾನಕರವಾಗಿ ಭತ್ಯೆ ಹೆಚ್ಚಳ ಘೋಷಣೆ ಬೇಗ ಆಗುವ ಸಾಧ್ಯತೆಯೂ ಇದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X