ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುತಾತ್ಮರ ಸ್ಮಾರಕಕ್ಕೆ ಕಾಂಗ್ರೆಸ್ ವಿರೋಧ

By Mrutyunjaya Kalmat
|
Google Oneindia Kannada News

Congress logo
ಬೆಂಗಳೂರು, ಏ. 14 : ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ನಲ್ಲಿ ಯೋಧರ ಸ್ಮಾರಕ ನಿರ್ಮಿಸಲು ಹೊರಟಿರುವ ಸರಕಾರವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸಿದೆ. ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿ ಅವರನ್ನು ಅವಹೇಳನ ಮಾಡಲು ಸರಕಾರ ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು,ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ಸಾಕಷ್ಟು ಮರಗಳ ಮಾರಣಹೋಮ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಸರಕಾರ ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ನಲ್ಲಿ ಹುತಾತ್ಮರ ಸ್ಮಾರಕ ನಿರ್ಮಿಸಿ ಮತ್ತಷ್ಟು ಮರಗಳ ನಾಶಕ್ಕೆ ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಯೋಧರ ಸ್ಮಾರಕವನ್ನು ಪ್ರತ್ಯೇಕ ಸ್ಥಳದಲ್ಲಿ ನಿರ್ಮಿಸಬೇಕು ಹಾಗೂ ಉದ್ಯಾನವನದಲ್ಲಿ ಸ್ಮಾರಕಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಯೋಧರ ಸ್ಮಾರಕ ಸರಕಾರದ ಸಮರ್ಥನೆ

ಇಂದಿರಾಗಾಂಧಿ ಸಂಗೀತ ಕಾರಂಜಿ ಸ್ಮಾರಕ ಪಾರ್ಕ್ ನಲ್ಲಿ ಸೈನಿಕ ಸ್ಮಾರಕ ಸ್ಥಾಪಿಸುವ ತನ್ನ ನಿರ್ಧಾರವನ್ನು ಸರಕಾರ ಸಮರ್ಥಿಸಿಕೊಂಡಿದೆ. ದೇಶಕ್ಕಾಗಿ ಪ್ರಾಣ ತೆತ್ತ ಯೋಧರನ್ನು ಸದಾ ಸ್ಮರಿಸಿಕೊಳ್ಳಲು ಮತ್ತು ದೇಶ ರಕ್ಷಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ನಿರ್ಮಾಣ ಕಾರ್ಯಕೈಗೊಳ್ಳಲಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X