ಒಳಮೀಸಲು ವಿಧೇಯಕಕ್ಕೆ ಸರಕಾರ ರೆಡಿ
ಬೆಂಗಳೂರು,
ಏ. 15 : ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದವರಿಗೆ ಒಳಮೀಸಲು ಕಲ್ಪಿಸುವ ಸಲುವಾಗಿ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಸರಕಾರದ ಈ ಕ್ರಮಕ್ಕೆ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. id="toptextpromo"> ನಗರದ ಶ್ರೀಗಂಧ ಕಾವಲ್ ನಲ್ಲಿ ಏರ್ಪಡಿಸಲಾಗಿದ್ದ ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪರಿಶಿಷ್ಟ ಜಾತಿ ಹಾಗೂ ಹಿಂದುಳಿ ವರ್ಗಕ್ಕೆ ಒಳಮೀಸಲು ಕಲ್ಪಿಸಲು ಸರಕಾರ ಬದ್ಧವಾಗಿದೆ. ಮೀಸಲಿನಲ್ಲೇ ಒಳಮೀಸಲು ಕಲ್ಪಿಸಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಧೇಯಕ ಅಂಗೀಕಾರಕ್ಕೆ ಎಲ್ಲ ಸದಸ್ಯರು ಪಕ್ಷಬೇಧ ಮರೆತು ಬೆಂಬಲ ನೀಡಬೇಕೆಂದು ಮನವಿ ಮಾಡಿದರು. id='are-slot-1' class='oiad oi-axt oiadv'> id='top-searched-articles'> ಒಳಮೀಸಲು ಕುರಿತು ಕೇವಲ ಚರ್ಚೆ ಮಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಬದಲಾಗಿ ಕಾರ್ಯರೂಪಕ್ಕೆ ತರಲು ಸರ್ವಪಕ್ಷ ನಿಯೋಗ ಕರೆದೊಯ್ದು ಪ್ರಧಾನಿ ಜೊತೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಯಡಿಯೂರಪ್ಪ ವಿವರಿಸಿದರು.











Click it and Unblock the Notifications