ಶಾಸಕ ಚಂದ್ರಶೇಖರ್ ಪಾಟೀಲ್ ರೇವೂರ್ ನಿಧನ
ಗುಲ್ಬರ್ಗ,
ಏ.15 : ಗುಲ್ಬರ್ಗ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರಶೇಖರ ಪಾಟೀಲ ರೇವೂರ್ ಬುಧವಾರ (ಏ.14 ) ರಾತ್ರಿ ಸುಮಾರು 11.30 ರ ವೇಳೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರೇವೂರ್ ಅವರಿಗೆ 57 ವರ್ಷ ವಯಸ್ಸಾಗಿತ್ತು. id="toptextpromo">ಸೇಡಂನಿಂದ
ಬೆಂಗಳೂರಿಗೆ ರೈಲು ಹತ್ತಲು ತಮ್ಮ ಬೆಂಬಲಿಗರೊಂದಿಗೆ ನಿಲ್ದಾಣಕ್ಕೆ ಬಂದಿದ್ದಾಗ ತೀವ್ರ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತರಾದ ರೇವೂರ್ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಡಲಾಗಿದೆ. ಅವರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. id='are-slot-1' class='oiad oi-axt oiadv'> id='top-searched-articles'>ರೇವೂರ್
2004 ಮತ್ತು 2009 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಇತ್ತೀಚಿಗೆ ಪಕ್ಷದಲ್ಲಿ ಉಂಟಾಗಿದ್ದ ಭಿನ್ನಮತದಲ್ಲಿ ರೆಡ್ಡಿ ಬಣದೊಂದಿಗೆ ಗುರುತಿಸಿಕೊಂಡಿದ್ದ ರೇವೂರ್ ನಗರದಲ್ಲಿ ನಡೆದಿದ್ದ ಪಕ್ಷದ ಸಭೆಯೊಂದರಲ್ಲಿ ಸಿಎಂ ಮುಂದೆ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು.











Click it and Unblock the Notifications