ಕೆಎಂಸಿ ರದ್ದು ಬೇಡ : ಸರಕಾರ ಒತ್ತಾಯ
ಬೆಂಗಳೂರು,
ಏ. 16 : ಮೂಲಭೂತ ಸೌಕರ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಮಣಿಪಾಲ ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡುವ ಭಾರತೀಯ ವೈದ್ಯಕೀಯ ಪರಿಷತ್ತಿನ ಪ್ರಸ್ತಾವನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದರೆ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ಸ್ಪಷ್ಟನೆ ನೀಡಿದೆ. id="toptextpromo">ರಾಜ್ಯದ
85 ವೈದ್ಯಕೀಯ ವಿದ್ಯಾರ್ಥಿಗಳು ಮಣಿಪಾಲ ವೈದ್ಯಕೀಯ ವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದು, ಭಾರತೀಯವೈದ್ಯಕೀಯ ಮಂಡಲಿಯ ಶಿಫಾರಸ್ಸ ಜಾರಿಯಾದರೆ ಈ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅವರನ್ನು ಬೇರೆಡೆ ವರ್ಗಾಯಿಸಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಣಿಪಾಲ ವೈದ್ಯಕೀಯ ಕಾಲೇಜಿನ ಮಾನ್ಯತೆ ರದ್ದು ಮಾಡುವುದು ಸೂಕ್ತವಲ್ಲ ಎಂದು ರಾಜ್ಯ ಸರಕಾರ ವಿವರಿಸಿದೆ. id='are-slot-1' class='oiad oi-axt oiadv'> id='top-searched-articles'> ಮೂಲಭೂತ ಸೌಕರ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿಸಲು ಎಂಸಿಐ ಮಾಡಿರುವ ಶಿಫಾರಸ್ಸು ಕಾನೂನು ಬಾಹಿರ ಎಂದು ಮಣಿಪಾಲ ವೈದ್ಯಕೀಯ ವಿದ್ಯಾಲಯದ ಆಡಳಿತ ಮಂಡಳಿ ರಿಟ್ ಅರ್ಜಿ ಸಲ್ಲಿಸಿದೆ.











Click it and Unblock the Notifications