ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮರಾಠಿ ನಾಯಕರಿಗೆ ಸಿಎಂ ತಿರುಗೇಟು

By Mahesh
|
Google Oneindia Kannada News

BS Yeddyurappa slams Marathi leaders
ಬೆಂಗಳೂರು, ಏ.18: ಕರ್ನಾಟಕದ ಯಾವುದೇ ಮೂಲೆಯಲ್ಲೂ ಮರಾಠಿಗರಿಗೆ ಅನ್ಯಾಯವಾದ ಪ್ರಕರಣಗಳು ದಾಖಲಾಗಿಲ್ಲ.ಪದೇ ಪದೇ ಗಡಿ ವಿವಾದವನ್ನು ಕೆದಕುತ್ತಿರುವ ಮರಾಠಿ ನಾಯಕರು ಕನ್ನಡಿಗರ ತಾಳ್ಮೆ, ಸಂಯಮವನ್ನೇ ದೌರ್ಬಲ್ಯ ಎಂದು ಭಾವಿಸಿದರೆ ಅದಕ್ಕೆ ತಕ್ಕ ಪಾಠವನ್ನು ಕಲಿಯ ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ಮಾತುಗಳನ್ನಾಡಿದರು.

ಗಡಿ ವಿವಾದಕ್ಕೆ ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕದ ಅವಿಭಾಜ್ಯ ಅಂಗ .ಬೆಳಗಾವಿ ಅಥವಾ ರಾಜ್ಯದ ಯಾವುದೇ ಪ್ರದೇಶದಲ್ಲಿ ಒಬ್ಬನೇ ಒಬ್ಬ ಮರಾಠಿ ವ್ಯಕ್ತಿ ಮೇಲೆ ಹಲ್ಲೆ ನಡೆದಿಲ್ಲ. ಹಾಗಿದ್ದರೂ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಪ್ರಚಾರ ಪಡೆಯಲಾಗುತ್ತಿದೆ. ಇದರ ಉದ್ದೇಶ ಕೇವಲ ರಾಜಕೀಯ ಲಾಭ ಪಡೆದುಕೊಳ್ಳುವುದು ಮಾತ್ರ ಪ್ರಧಾನಿಗಳು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಬೇಕೆಂದು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಕನ್ನಡಿಗರು ಶಾಂತಿ ಮತ್ತು ಸಂಯಮಕ್ಕೆ ದೇಶದಲ್ಲೇ ಹೆಸರುವಾಸಿಯಾದವರು.ನಮ್ಮ ಸಹನೆಯನ್ನು ದೌರ್ಬಲ್ಯ ಎಂದು ಅವರು ತಿಳಿದುಕೊಂಡರೆ ಖಂಡಿತಾ ನಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರ ಅರಿವಿಗೆ ಬರುವಂತೆ ಮಾಡಬೇಕಾಗುತ್ತದೆ. ದಯವಿಟ್ಟು ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಸಿಎಂ ಗುಡುಗಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X