ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂತಕಿ ನಳಿನಿಯಿಂದ ಮೊಬೈಲ್ ವಶ

By Mahesh
|
Google Oneindia Kannada News

Nalini
ವೆಲ್ಲೂರು, ಏ.21: ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ನಳಿನಿಯಿಂದ ವೆಲ್ಲೂರು ಜೈಲಾಧಿಕಾರಿಗಳು ಸೆಲ್‌ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

'ಮಂಗಳವಾರ ಬೆಳಗ್ಗೆ ಎಂದಿನಂತೆ ತಪಾಸಣೆ ಸಂದರ್ಭದಲ್ಲಿ ನಳಿನಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಫೋನ್ ಚಾಲನೆಯಲ್ಲಿತ್ತು.ಮೊಬೈಲ್‌ನಲ್ಲಿ ದಾಖಲಾಗಿರುವ ಕರೆಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ನಂತರ, ನಳಿನಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದು ಎಡಿಜಿಪಿ ಕೆ.ಆರ್. ಶ್ಯಾಮ್‌ಸುಂದರ್ ತಿಳಿಸಿದರು.

ಸದ್ಯ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ, ಬಿಡುಗಡೆ ಕೋರಿ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದರು. ಆದರೆ, ಏ.6ರಂದು ಮದ್ರಾಸ್ ಹೈಕೋರ್ಟ್ ನ ವಿಭಾಗೀಯ ಪೀಠ, ನಳಿನಿ ಅವರ ಮನವಿಯನ್ನು ತಿರಸ್ಕರಿಸಿತ್ತು. 1991 ರ ಮೇ.21 ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ಎಲ್ ಟಿಟಿಇ ತಂಡದಲ್ಲಿ ನಳಿನಿ ಪ್ರಮುಖ ಸದಸ್ಯೆಯಾಗಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X