ಉಮಾಭಾರತಿ ಬಿಜೆಪಿ ಸೇರಲಿ : ಪೇಜಾವರ ಶ್ರೀ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮಾನ ಮನಸ್ಕರು ಒಂದೇ ವೇದಿಕೆಯಲ್ಲಿ ಇರುವುದು ಸರಿಯೆನ್ನುವ ಕಾರಣಕ್ಕೆ ಉಮಾಭಾರತಿಗೆ ಈ ಸಲಹೆ ನೀಡುತ್ತಿದ್ದೇನೆ ಎಂದರು. ರಾಜ್ಯದಲ್ಲಿ ಕೃಷಿಭೂಮಿ ಸ್ವಾಧೀನ ಮಾಡಿಕೊಳ್ಳುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಸರಕಾರಕ್ಕೆ ನೀಡಿರುವ ಗಡುವನ್ನು ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆಯಲ್ಲಿ ಮೇ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಅಷ್ಟರೊಳಗೆ ಸರಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications