ರಾಮನಗರದಲ್ಲಿ ನಿತ್ಯಾನಂದನ ಜಾಮೀನು ಅರ್ಜಿ ವಜಾ

ಈ ಹಿನ್ನೆಲೆಯಲ್ಲಿ ನಿತ್ಯಾನಂದನ ಪರವಕೀಲರಾದ ಚಂದ್ರಮೌಳಿ ಮಾರ್ಚ್ 24ರಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 9ರಂದು ಸರ್ಕಾರದ ಪರ ವಕೀಲ ಶ್ರೀರಾಮರೆಡ್ಡಿಯವರು ಸ್ತ್ರೀಲೋಲ ನಿತ್ಯಾನಂದನಿಗೆ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದ್ದರು. 5 ಬಾರಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿತ್ತು. ನಂತರ ಬುಧವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಸತ್ರ ನ್ಯಾಯಾಧೀಶ ಸಿ.ಜಿ.ಹುನಗುಂದರವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ನಡುವೆ ಸಿಐಡಿ ಅಧಿಕಾರಿಗಳು ನಿತ್ಯಾನಂದನ ಬಿಡದಿಯ ಆಶ್ರಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವಾರು ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆನ್ನಲಾಗಿದೆ. ನಟಿ ರಂಜಿತಾ ಜೊತೆ ನಿತ್ಯಾನಂದ ನಡೆಸಿದ ರಾಸಲೀಲೆ ಪ್ರಕರಣ ಬಹಿರಂಗವಾದ ದಿನದಂದು ಇದ್ದಕ್ಕಿದ್ದಂತೆ ಬಿಡದಿ ಆಶ್ರಮದ ರಹಸ್ಯ ಕುಟೀರಗಳಿಗೆ ಬೆಂಕಿ ಬಿದ್ದುದರ ಹಿಂದೆ ಹಲವು ಅನುಮಾನಗಳು ಮೂಡಿವೆ. ಕೆಲವು ಮೂಲದ ಪ್ರಕಾರ ಖೋಟಾ ನೋಟುಗಳನ್ನು ಸಂಗ್ರಹಿಸಿಟ್ಟಿದ್ದರಿಂದ ಮಠದ ಕೆಲವು ಚೇಲಾಗಳೇ ಬೆಂಕಿ ಇಟ್ಟಿದ್ದಾರೆಂದು ಹೇಳಲಾಗುತ್ತಿದೆ. ಒಟ್ಟಾರೆ ಪೊಲೀಸರ ಪ್ರಾಮಾಣಿಕ ತನಿಖೆಯಿಂದ ನಿತ್ಯಾನಂದನ ಮತ್ತೊಂದು ವ್ಯಾಘ್ರಮುಖದ ದರ್ಶನವಾಗಬೇಕಾಗಿದೆ.
ಮೊದಲಿಗೆ ನಿತ್ಯಾನಂದನ ಪ್ರಕರಣವನ್ನು ಸ್ಥಳೀಯ ಡಿವೈಎಸ್‌ಪಿ ದೇವರಾಜ್ ತನಿಖೆ ನಡೆಸುತ್ತಿದ್ದರು. ನಂತರ ಸಿ.ಐ.ಡಿ ಎಸ್.ಪಿ ಯೋಗಪ್ಪನವರ ನೇತೃತ್ವದಲ್ಲಿ ನಿತ್ಯಾನಂದನ ಬೇಟೆ ಕಾರ್ಯ ನಡೆಯುತ್ತಿತ್ತು. ಹಿಮಾಚಲ ಪ್ರದೇಶದಲ್ಲಿ ಬಂಧಿಯಾಗಿರುವ ನಿತ್ಯಾನಂದನನ್ನು ಗುರುವಾರ ಬೆಂಗಳೂರಿಗೆ ಕರೆತರಲಾಗುತ್ತಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications